IPL MINI AUCTION 2022 : ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲ್ ಆದ ಸ್ಯಾಮ್ ಕರ್ರನ್ – ಪಂಜಾಬ್ ಕಿಂಗ್ಸ್ ಕರ್ರನ್ ಮೇಲೆ ಸುರಿದ ಹಣ ಎಷ್ಟು ಕೋಟಿ ಗೊತ್ತಾ…!?

IPL MINI AUCTION 2022 : ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲ್ ಆದ ಸ್ಯಾಮ್ ಕರ್ರನ್ – ಪಂಜಾಬ್ ಕಿಂಗ್ಸ್ ಕರ್ರನ್ ಮೇಲೆ ಸುರಿದ ಹಣ ಎಷ್ಟು ಕೋಟಿ ಗೊತ್ತಾ…!?

ನ್ಯೂಸ್ ಆ್ಯರೋ : ಐಪಿಎಲ್ ಮಿನಿ ಹರಾಜಿನಲ್ಲಿ ಐಪಿಎಲ್ ನ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಪಂಜಾಬ್ ಕಿಂಗ್ಸ್ ಗೆ ಮಾರಾಟವಾಗುವ ಮೂಲಕ ಇಂಗ್ಲೆಂಡ್ ನ ಸ್ಯಾಮ್ ಕರ್ರನ್ ದಾಖಲೆ ಬರೆದಿದ್ದಾರೆ. ಕಳೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಯಾಮ್ ಕರ್ರನ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಹಿನ್ನೆಲೆಯಲ್ಲಿ ಈ ಬಾರಿ ಅತೀ ಹೆಚ್ಚು ಬೆಲೆಗೆ ಮಾರಾಟವಾಗುವ ನಿರೀಕ್ಷೆ ಇತ್ತು.

ಕರ್ರನ್ ಖರೀದಿಗೆ ಹಲವು ತಂಡಗಳು ಭಾರೀ ಪೈಪೋಟಿ ನಡೆಸಿದವು. ಸ್ಯಾಮದ ಕರ್ರನ್ ಹೆಸರು ಕೂಗುತ್ತಲೇ ಬಹುಪಾಲು ತಂಡಗಳು ಕರ್ರನ್ ಗಾಗಿ ಬಿಡ್ ಮಾಡಿದವು. ಆದರೆ ಕೊನೆಗೆ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಸ್ಪರ್ಧೆ ಏರ್ಪಟ್ಟು ಕೊನೆಗೂ ಪಂಜಾಬ್ ಕಿಂಗ್ಸ್ 18.5 ಕೋಟಿ ನೀಡಿ ಸ್ಯಾಮ್ ಕರ್ರನ್ ಅವರನ್ನು ಖರೀದಿಸಿತು.

ಇದುವರೆಗೆ ಐಪಿಎಲ್‌ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತ ಪಡೆದ ದಾಖಲೆ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್‌ ಕ್ರಿಸ್‌ ಮಾರಿಸ್‌ ಹೆಸರಿನಲ್ಲಿತ್ತು. 2021ರಲ್ಲಿ ನಡೆದಿದ್ದ ಮಿನಿ ಹರಾಜಿನಲ್ಲಿ ರಾಜಸ್ತಾನ ರಾಯಲ್ಸ್‌ ತಂಡ ಅವರನ್ನು ₹ 16.25 ಕೋಟಿ ನೀಡಿ ಖರೀದಿಸಿತ್ತು.

ಹರಾಜು ಪ್ರಕ್ರಿಯೆಯಲ್ಲಿ 405 ಆಟಗಾರರು ಅದೃಷ್ಟಪರೀಕ್ಷೆಗೆ ಒಳಗಾಗಿದ್ದಾರೆ. ಖಾಲಿ ಇರುವ 87 ಸ್ಥಾನಗಳಿಗೆ ಹರಾಜು ನಡೆಯುತ್ತಿದೆ. ಭಾರತ 273 ಆಟಗಾರರ ಜೊತೆ 132 ವಿದೇಶಿ ಆಟಗಾರರೂ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 119 ಅಂತಾರಾಷ್ಟಿರಯ ಆಟಗಾರರು, 282 ಅನ್‌ಕ್ಯಾಪ್ಡ್ ಆಟಗಾರರು ಪಟ್ಟಿಯಲ್ಲಿದ್ದಾರೆ. ಎಲ್ಲಾ 10 ತಂಡಗಳು ಕೆಲ ಪ್ರಮುಖ ಆಟಗಾರರ ಹುಡುಕಾಟದಲ್ಲಿವೆ. ಕರ್ನಾಟಕದ 16 ಆಟಗಾರರು ಹರಾಜಿನಲ್ಲಿ ಪಾಲ್ಗೊಂಡಿದ್ದಾರೆ. ಹರಾಜಿಗೂ ಮೊದಲು 10 ತಂಡಗಳು ಒಟ್ಟು 163 ಆಟಗಾರರನ್ನು ರೀಟೈನ್‌ ಮಾಡಿಕೊಂಡಿವೆ. ಹರಾಜಿನಲ್ಲಿರುವ 87 ಖಾಲಿ ಸ್ಥಾನಗಳಲ್ಲಿ ಗರಿಷ್ಠ 30 ಸ್ಥಾನಗಳು ವಿದೇಶಿ ಆಟಗಾರರ ಪಾಲಾಗಬಹುದಾಗಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *