ಟೆನ್ನಿಸ್ ಗೆ ವಿದಾಯ ಘೋಷಿಸಿದ ಮೂಗುತಿ ಸುಂದರಿ – ನಿವೃತ್ತಿ ದಿನಾಂಕ ಪ್ರಕಟಿಸಿದ ಸಾನಿಯಾ ಮಿರ್ಜಾ

ಟೆನ್ನಿಸ್ ಗೆ ವಿದಾಯ ಘೋಷಿಸಿದ ಮೂಗುತಿ ಸುಂದರಿ – ನಿವೃತ್ತಿ ದಿನಾಂಕ ಪ್ರಕಟಿಸಿದ ಸಾನಿಯಾ ಮಿರ್ಜಾ

ನ್ಯೂಸ್ ಆ್ಯರೋ : ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಟೆನಿಸ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ದುಬೈ ಡ್ಯೂಟಿ ಚಾಂಪಿಯನ್‌ಶಿಪ್ ಟೂರ್ನಮೆಂಟ್ ಬಳಿಕ ವೃತ್ತಿ ಬದುಕಿನಿಂದ ನಿವೃತ್ತಿ ಪಡೆದುಕೊಳ್ಳುತ್ತಿರುವುದಾಗಿ ಅವರು ಘೋಷಿಸಿದ್ದಾರೆ.

ಇವರು ಕಳೆದ ವರ್ಷವೇ ಯುಎಸ್‌ ಓಪನ್ ನಂತರ ಟೆನಿಸ್‌ ವೃತ್ತಿ ಜೀವನದಿಂದ ನಿವೃತ್ತಿಯಾಗುವ ಬಗ್ಗೆ ನಿರ್ಧರಿಸಿದ್ದರು. ಹೀಗಾಗಿ ಮುಂದಿನ ತಿಂಗಳು ನಡೆಯುವ ದುಬೈ ಡ್ಯೂಟಿ ಫ್ರೀ ಟೆನಿಸ್ ಚಾಂಪಿಯನ್ ಶಿಪ್‌ನಲ್ಲಿ ಆಡುವ ಮೂಲಕ ಅಲ್ಲಿಗೆ ತಮ್ಮ ವೃತ್ತಿ ಬದುಕನ್ನು ಕೊನೆಗೊಳಿಸಲಿದ್ದಾರೆ.

36 ವರ್ಷ ವಯಸ್ಸಿನ ಸಾನಿಯಾ ಮಿರ್ಜಾ ಕಳೆದೊಂದು ದಶಕದಿಂದ ದುಬೈಯಲ್ಲಿ ವಾಸಿಸುತ್ತಿದ್ದು ಪಾಕಿಸ್ತಾನಿ ಕ್ರಿಕೆಟಿಗ್ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕವೂ ಭಾರತಕ್ಕಾಗಿ ತಮ್ಮ ಟೆನಿಸ್ ಆಟವನ್ನು ಮುಂದುವರಿಸಿದ್ದರು.

ಆರು ಗ್ರ್ಯಾಂಡ್ ಸ್ಲ್ಯಾಮ್ ಡಬಲ್ಸ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಸಾನಿಯಾ, 2016 ರಲ್ಲಿ ಮಹಿಳಾ ಡಬಲ್ಸ್ ಪ್ರಶಸ್ತಿಯನ್ನು ಗೆದ್ದರು. 2005ರಲ್ಲಿ ತವರು ಕ್ಷೇತ್ರ ಹೈದರಾಬಾದ್‌ನಲ್ಲಿ ಪಂದ್ಯ ಗೆಲ್ಲುವ ಮೂಲಕ ಡಬ್ಲ್ಯೂಟಿಎ ಸಿಂಗಲ್ಸ್‌ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಆರು ಗ್ರ್ಯಾಂಡ್ ಸ್ಲ್ಯಾಮ್ ಡಬಲ್ಸ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಸಾನಿಯಾ, 2016 ರಲ್ಲಿ ಮಹಿಳಾ ಡಬಲ್ಸ್ ಪ್ರಶಸ್ತಿಯನ್ನು ಗೆದ್ದರು. 2007ರ ವೇಳೆಗೆ ಅವರು ಅಗ್ರ 30ರೊಳಗೆ ಪ್ರವೇಶಿಸಿದರು ಮತ್ತು ವಿಶ್ವದ 27ನೇ ಶ್ರೇಯಾಂಕವನ್ನು ಪಡೆದಿದ್ದರು.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *