IND vs AFG : ನಾಳೆಯೂ ಶುಭಮನ್​​ ಗಿಲ್ ಆಡೋದಿಲ್ವಾ? – ಬಿಸಿಸಿಐ ವೈದ್ಯರ ತಂಡ ಹೇಳೋದೇನು?

IND vs AFG : ನಾಳೆಯೂ ಶುಭಮನ್​​ ಗಿಲ್ ಆಡೋದಿಲ್ವಾ? – ಬಿಸಿಸಿಐ ವೈದ್ಯರ ತಂಡ ಹೇಳೋದೇನು?

ನ್ಯೂಸ್ ಆ್ಯರೋ : ಐಸಿಸಿ ವಿಶ್ವ ಕಪ್ ಸಂಭ್ರಮದಲ್ಲಿದ್ದ ಭಾರತ ತಂಡದ ಶುಭಮನ್​​ ಗಿಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವುದು ಕ್ರೀಡಾ ಅಭಿಮಾನಿಗಳಲ್ಲಿ ಗಾಬರಿ, ಬೇಸರ ಉಂಟು ಮಾಡಿದ್ದರೂ ಅವರು ಶೀಘ್ರವಾಗಿ ಗುಣಮುಖವಾಗಿ ಬರಲಿ ಎಂದು ಹಾರೈಸುತ್ತಿದ್ದಾರೆ.

ಇಡೀ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಈಗ ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ನಡುವೆ ಕಳೆದ ಕೆಲವು ದಿನಗಳಿಂದ ಭಾರತ ತಂಡದ ಹಲವರನ್ನು ಗಾಯದ ಸಮಸ್ಯೆ ಕಾಡಿತ್ತು. ಈಗ ಡೆಂಗ್ಯೂ ನಿಂದ ಬಳಲುತ್ತಿರುವ ಶುಭಮನ್​​ ಗಿಲ್ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಗ್ಯೂ ನಿಂದ ಬಳಲುತ್ತಿದ್ದ ಗಿಲ್ ವಿಶ್ವಕಪ್​ ಮೊದಲ ಪಂದ್ಯಕ್ಕೆ ಲಭ್ಯವಿರಲಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಡುವ ಅವಕಾಶವನ್ನೂ ಕಳೆದುಕೊಂಡರು. ಬುಧವಾರ ಅಫ್ಘಾನಿಸ್ತಾನದ ವಿರುದ್ಧ ಭಾರತ ಆಡಲಿದ್ದು ಇದರಲ್ಲಿ ಗಿಲ್ ಆಡುವುದು ಖಚಿತವಾಗಿತ್ತು. ಆದರೆ ಗಿಲ್​ ಆರೋಗ್ಯದಲ್ಲಿ ವ್ಯತ್ಯಯವಾಗಿರುವುದರಿಂದ ಅವರು ಈ ಪಂದ್ಯದಲ್ಲೂ ಆಡುವುದಿಲ್ಲ ಎನ್ನಲಾಗಿದೆ.

ಗಿಲ್ ಅವರ ದೇಹದಲ್ಲಿ ಪ್ಲೇಟ್ಲೆಟ್ ಸಂಖ್ಯೆ ಕಡಿಮೆಯಾಗಿದ್ದು, ಹೀಗಾಗಿ ಮುಂಜಾಗೃತಾ ಕ್ರಮವಾಗಿ ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಸಿಸಿಐನ ಮೆಡಿಕಲ್ ತಂಡ ಗಿಲ್ ಅವರ ಆರೋಗ್ಯದ ಮೇಲೆ ನಿರಂತರವಾಗಿ ನಿಗಾ ವಹಿಸಿದೆ. ಗಿಲ್ ಅವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಕಣಕ್ಕೆ ಇಳಿಯಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ರೋಹಿತ್ ಜೊತೆ ಆರಂಭಿಕ ಆಟಗಾರರಾಗಿ ಕಣಕ್ಕೆ ಇಳಿದಿದ್ದ ಇವರು ಉತ್ತಮ ಪ್ರದರ್ಶನ ತೋರದೆ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *