ಮತ್ತೊಬ್ಬ ಶ್ರೀಲಂಕಾದ ಕ್ರಿಕೆಟ್ ಆಟಗಾರ ಒಂದು ವರ್ಷ ಬ್ಯಾನ್ – ಗುಣತಿಲಕ ಬಳಿಕ ಚಾಮಿಕಾ ಕರುಣಾರತ್ನೆ ಅವರಿಗೂ ನಿಷೇಧದ ಶಿಕ್ಷೆ

ಮತ್ತೊಬ್ಬ ಶ್ರೀಲಂಕಾದ ಕ್ರಿಕೆಟ್ ಆಟಗಾರ ಒಂದು ವರ್ಷ ಬ್ಯಾನ್ – ಗುಣತಿಲಕ ಬಳಿಕ ಚಾಮಿಕಾ ಕರುಣಾರತ್ನೆ ಅವರಿಗೂ ನಿಷೇಧದ ಶಿಕ್ಷೆ

ನ್ಯೂಸ್ ಆ್ಯರೋ : ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವ ಕಪ್ ನಲ್ಲಿ ಆಟಗಾರರ ಒಪ್ಪಂದದ ಹಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಲಂಕಾ ಕ್ರಿಕೆಟ್ ಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಅಮಾನತುಪಡಿಸಿದೆ.

ಕರುಣಾರತ್ನೆ ಹೇಗೆ ಹಲವು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಶ್ರೀಲಂಕಾ ಕ್ರಿಕೆಟ್ ಹೆಚ್ಚು ವಿವರಿಸಿಲ್ಲ. ಆದರೆ, ತನ್ನ ವಿರುದ್ಧದ ಎಲ್ಲಾ ಆರೋಪಿಗಳಿಗೆ ತಪ್ಪೊಪ್ಪಿಕೊಂಡಿದ್ದು, 5,000 ಡಾಲರ್ ದಂಡವನ್ನೂ ವಿಧಿಸಲಾಗಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ತನಿಖಾ ಸಮಿತಿಯ ಸಂಶೋಧನೆಗಳು ಮತ್ತು ಶಿಫಾರಸುಗಳ ನಂತರ, ಎಸ್ಎಲ್ಸಿಯ ಕಾರ್ಯಕಾರಿ ಸಮಿತಿಯು ಎಲ್ಲಾ ಪ್ರಕಾರದ ಕ್ರಿಕೆಟ್ ನಲ್ಲಿ ಭಾಗವಹಿಸದಂತೆ ಒಂದು ವರ್ಷ ನಿಷೇಧಿಸಲಾಗಿದೆ ಮತ್ತು ಒಂದು ವರ್ಷದ ಅವಧಿಗೆ ಅಮಾನತುಗೊಳಿಸಲಾಗುತ್ತದೆ ಎಂದು ಎಸ್ಎಲ್ಸಿ ತಿಳಿಸಿದೆ.

ಕರುಣಾರತ್ನೆ ಮಾಡಿದ ಉಲ್ಲಂಘನೆಗಳ ಗಂಭೀರತೆ ಪರಿಗಣಿಸಿ, ಆತನ ಕ್ರಿಕೆಟ್ ಭವಿಷ್ಯದ ಮೇಲೆ ಪರಿಣಾಮ ಬೀರದಂತೆ ಮತ್ತು ಮುಂದೆ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಬೇಕಾಗಿದೆ ಎಂದು ತನಿಖಾ ಸಮಿತಿಯು ತನ್ನ ವರದಿಯಲ್ಲಿ ಕಾರ್ಯಕಾರಿ ಸಮಿತಿಗೆ ಶಿಫಾರಸು ಮಾಡಿತ್ತು. ಶ್ರೀಲಂಕಾ ವಿಶ್ವಕಪ್ನ ಸೆಮಿಫೈನಲ್ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು. ಬ್ಯಾಟ್ಸ್ಮನ್ ದನುಷ್ಕಾ ಗುಣತಿಲಕ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗಾಗಿ ಎಸ್ಎಲ್ಸಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ಸಹ ರಚಿಸಿದೆ. ಅಲ್ಲದೇ ಈಗಾಗಲೇ ಧನುಷ್ಕ‌ ಗುಣತಿಲಕ ಅವರಿಗೂ ನಿಷೇಧ ಹೇರಲಾಗಿದೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *