Team India Announced : ಐರ್ಲೆಂಡ್ ಸರಣಿಗೆ ಟೀಂ ಇಂಡಿಯಾ ಪ್ರಕಟ – ಬುಮ್ರಾ ನಾಯಕ, ಐಪಿಎಲ್ ಹೀರೋಗಳಿಗೆ ಸಿಕ್ತು ಚಾನ್ಸ್..!!

Team India Announced : ಐರ್ಲೆಂಡ್ ಸರಣಿಗೆ ಟೀಂ ಇಂಡಿಯಾ ಪ್ರಕಟ – ಬುಮ್ರಾ ನಾಯಕ, ಐಪಿಎಲ್ ಹೀರೋಗಳಿಗೆ ಸಿಕ್ತು ಚಾನ್ಸ್..!!

ನ್ಯೂಸ್ ಆ್ಯರೋ : ವೆಸ್ಟ್ ಇಂಡೀಸ್ ಸರಣಿ ಬಳಿಕ ನಡೆಯಲಿರುವ ಐರ್ಲೆಂಡ್‌ ಪ್ರವಾಸದ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ‌. ಅಚ್ಚರಿಯೆಂಬಂತೆ ಹಲವು ಸಮಯದಿಂದ ತಂಡದ ಹೊರಗಿದ್ದ ಜಸ್ಪ್ರಿತ್ ಬುಮ್ರಾ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಈ ಪಂದ್ಯಾವಳಿಗೆ ಬಿಸಿಸಿಐ ಹೆಚ್ಚು ಯುವ ಆಟಗಾರರನ್ನೇ ಆಯ್ಕೆ ಮಾಡಿದ್ದು, ರುತುರಾಜ್ ಗಾಯಕ್ವಾಡ್​ಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ಇದು ಮುಂಬರುವ ಏಷ್ಯಾಕಪ್ ಮತ್ತು ಐಸಿಸಿ ಏಕದಿನ ವಿಶ್ವಕಪ್‌ಗೆ ತಂಡವನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ತಂಡದಲ್ಲಿ ಐಪಿಎಲ್‌ ಹೀರೋಗಳಾದ ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ ಇದ್ದು, ಬೌಲಿಂಗ್ ವಿಭಾಗದಲ್ಲಿ ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್ ಆಯ್ಕೆಯಾಗಿದ್ದಾರೆ. ಗಾಯದಿಂದ ಚೇತರಿಸಿಕೊಂಡ ಪ್ರಸಿದ್ಧ ಕೃಷ್ಣ ಮತ್ತೆ ಲಯಕ್ಕೆ ಮರಳುವ ನಿರೀಕ್ಷೆ ಇಡಲಾಗಿದೆ.

ಭಾರತ-ಐರ್ಲೆಂಡ್ ಸರಣಿ ವೇಳಾಪಟ್ಟಿ:
ಆಗಸ್ಟ್ 18 ರಂದು ಮೊದಲ ಟಿ20 ಪಂದ್ಯ
2ನೇ ಪಂದ್ಯವು ಆಗಸ್ಟ್ 20
3ನೇ ಪಂದ್ಯ ಆಗಸ್ಟ್ 22

ಈ ಎಲ್ಲಾ ಪಂದ್ಯಗಳಿಗೆ ಡಬ್ಲಿನ್​ನ ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಐರ್ಲೆಂಡ್ ಸರಣಿಗೆ ಭಾರತ ಟಿ20 ತಂಡ:

ಜಸ್​ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಶಹಬಾಝ್ ಅಹ್ಮದ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *