Asian Games 2023 : ಚೀನಾದಲ್ಲಿ ಪದಕದ ಶತಕ ಬಾರಿಸಿದ ಭಾರತ – ಭಾರತೀಯರಿಂದ ಮುಂದುವರಿದ ಪದಕಗಳ ಬೇಟೆ..!!

Asian Games 2023 : ಚೀನಾದಲ್ಲಿ ಪದಕದ ಶತಕ ಬಾರಿಸಿದ ಭಾರತ – ಭಾರತೀಯರಿಂದ ಮುಂದುವರಿದ ಪದಕಗಳ ಬೇಟೆ..!!

ನ್ಯೂಸ್ ಆ್ಯರೋ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತ 100 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಅಧಿಕೃತವಾಗಿ ಭಾರತವು ಇಲ್ಲಿಯವರೆಗೆ 100 ಪದಕಗಳನ್ನು ಗೆದ್ದಿದೆ.

2023 ರ ಆವೃತ್ತಿಯು ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತದ ಅತ್ಯುತ್ತಮ ಆವೃತ್ತಿ ಮಾತ್ರವಲ್ಲ, ಭಾರತವು ಪದಕ ಪಟ್ಟಿಯಲ್ಲಿ ಮೂರು ಅಂಕಿಯ ಗಡಿಯನ್ನು ಮುಟ್ಟುತ್ತಿರುವುದು ಇದೇ ಮೊದಲು.

ಇದಕ್ಕೂ ಮೊದಲು 2018ರಲ್ಲಿ ಭಾರತ 70 ಪದಕಗಳನ್ನು ಜಯಿಸಿತ್ತು. ಒಟ್ಟು 100 ಪದಕಗಳನ್ನು ಗೆದ್ದಿರುವ ಭಾರತ ಹೊಸ ಇತಿಹಾಸ ನಿರ್ಮಿಸಿದೆ.

ಇದು ಸಾಧನೆಯಲ್ಲಿ ಭಾಗಿಯಾಗಿರುವ ನಮ್ಮ ಕ್ರೀಡಾಪಟುಗಳ ಕನಸುಗಳು, ಸಮರ್ಪಣೆ ಮತ್ತು ತಂಡದ ಕೆಲಸದ ಶಕ್ತಿಗೆ ಸಾಕ್ಷಿಯಾಗಿದೆ. ಈ ಸಾಧನೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿ – ಕಠಿಣ ಪರಿಶ್ರಮ ಮತ್ತು ಉತ್ಸಾಹದಿಂದ ಏನು ಬೇಕಾದರೂ ಸಾಧ್ಯ ಎಂದು ತೋರಿಸಿದೆ.

ಇಂದು ದಿನದ ಆರಂಭದಲ್ಲಿ ಜ್ಯೋತಿ ವೆನ್ನಮ್ ಅವರು ಮಹಿಳೆಯರ ಕಾಂಪೌಂಡ್‌ ಬಿಲ್ಲುಗಾರಿಕೆಯಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು. ಅಂತೆಯೆ ಅದಿತಿ ಸ್ವಾಮಿ ಅವರು ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇದು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಜ್ಯೋತಿ ಅವರ ಮೂರನೇ ಚಿನ್ನದ ಪದಕವಾಗಿದೆ. ಈ ಹಿಂದೆ ಮಹಿಳಾ ಕಾಂಪೌಂಡ್ ಮತ್ತು ಮಿಶ್ರ ಸಂಯುಕ್ತ ತಂಡಗಳ ಈವೆಂಟ್‌ಗಳಲ್ಲಿ ಪದಕ ಬಾಚಿಕೊಂಡಿದ್ದರು.

ಬಳಿಕ ಓಜಸ್ ಪ್ರವೀಣ್ 2023 ರ ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ ಕಾಂಪೌಂಡ್ ಫೈನಲ್ ಅನ್ನು ಗೆಲ್ಲುವ ಮೂಲಕ ತಮ್ಮ ಮೂರನೇ ಚಿನ್ನದ ಪದಕವನ್ನು ಗೆದ್ದರು. ಅಭಿಷೇಕ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಜ್ಯೋತಿ ತನ್ನ ಮೊದಲ ಪ್ರಯತ್ನದಲ್ಲಿ ಒಂಬತ್ತು ರನ್ ಬಾರಿಸಿದ ನಂತರ ಕೊರಿಯಾದ ಚೈವಾನ್ ಸೋ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಮುನ್ನಡೆ ಸಾಧಿಸಿದರು. ಅಂತಿಮವಾಗಿ 149-145 ಅಂಕಗಳೊಂದಿಗೆ ಗೆದ್ದುಕೊಂಡರು.

ಇದಕ್ಕೂ ಮುನ್ನ ಮಹಿಳೆಯರ ಕಾಂಪೌಂಡ್ ಸ್ಪರ್ಧೆಯಲ್ಲಿ ಇಂಡೋನೇಷ್ಯಾದ ಝಿಲಿಜಾಟಿ ಫಧ್ಲಿ ವಿರುದ್ಧ ಅದಿತಿ ಕಂಚಿನ ಪದಕ ಗೆದ್ದಿದ್ದರು. ಅಂತಿಮ ಎರಡು ಪಂದ್ಯಗಳು ಕ್ರಮವಾಗಿ 30 ಮತ್ತು 29 ಸ್ಕೋರ್ಗಳೊಂದಿಗೆ ಕೊನೆಗೊಂಡು ಅದಿತಿ 146-140 ಅಂಕಗಳೊಂದಿಗೆ ಸ್ಪರ್ಧೆಯಲ್ಲಿ ಜಯಗಳಿಸಿದರು.

ಇನ್ನು ಭಾರತಕ್ಕೆ ನೂರನೇ ಪದಕ ಬಂದಿದ್ದು ಮಹಿಳೆಯರ ಕಬಡ್ಡಿಯಿಂದ. ಈ ರಣರೋಚಕ ಪಂದ್ಯದಲ್ಲಿ ಭಾರತ 26-25 ಅಂಕಗಳಿಂದ ಚೈನೀಸ್ ತೈಪೆಯನ್ನು ಸೋಲಿಸಿ ಚಿನ್ನವನ್ನು ಗೆದ್ದು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿತು. ಅಂಕಣದಲ್ಲೇ ಕಬಡ್ಡಿ ಆಟಗಾರ್ತಿಯರು ಗೆಲುವಿನ ಆನಂದ ಭಾಷ್ಪ ಸುರಿಸಿದರೆ ಅತ್ತ ಚೈನೀಸ್ ತೈಪೆಯ ಆಟಗಾರ್ತಿಯರು ಸೋತ ನೋವಿನೊಂದಿಗೆ ಕಣ್ಣೀರಿನ ಕೋಡಿ ಹರಿಸಿದ್ದು ಭಾರತದ ಸಾಧನೆಯನ್ನು ಕಣ್ಣೆದುರು ತಂದಂತಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *