ವಿರಾಟ್ ಬಳಸೋ ಬ್ಯಾಟ್ ನ ಬೆಲೆ ಎಷ್ಟು ಗೊತ್ತಾ…!?

ವಿರಾಟ್ ಬಳಸೋ ಬ್ಯಾಟ್ ನ ಬೆಲೆ ಎಷ್ಟು ಗೊತ್ತಾ…!?

ನ್ಯೂಸ್‌ ಆ್ಯರೋ : ಭಾರತೀಯ ತಂಡ ಸ್ಫೋಟ ಬ್ಯಾಟ್ಸ್‌ಮನ್‌ ವಿರಾಟ್ ಕೊಹ್ಲಿ ಕೆಲ ದಿನಗಳ ವಿಶ್ರಾಂತಿಯ ಬಳಿಕ ಮೈದಾನದಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ. ಜನವರಿ 10 ರಂದು ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ 2023ರ ವರ್ಷದ ಮೊದಲ ಪಂದ್ಯವನ್ನು ಆಡಲಿದ್ದಾರೆ.

ವಿರಾಟ್ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಭಾಗವಾಗಿರಲಿಲ್ಲ. ಅವರನ್ನು ಹೊರತುಪಡಿಸಿ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ವಿರಾಟ್ ಸೇರಿದಂತೆ ಹಿರಿಯ ಆಟಗಾರರು ಮತ್ತೆ ತಂಡ ಸೇರಿದ್ದು, ಮತ್ತೆ ತಂಡದಲ್ಲಿ ಹೊಸ ಉತ್ಸಾಹ ಮೂಡಿದೆ.

ಟೀಂ ಇಂಡಿಯಾ ಈಗ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ವಿಶ್ರಾಂತಿಯಲ್ಲಿದ್ದ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಗುವಾಹಟಿ ತಲುಪಿದ್ದಾರೆ. ಅವರ ಕೆಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ, ಅದರಲ್ಲಿ ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದಾರೆ.

ರೋಹಿತ್ ಶರ್ಮಾ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ನಾಯಕತ್ವವನ್ನು ನಿಭಾಯಿಸಲಿದ್ದಾರೆ. ಇದಕ್ಕೂ ಮುನ್ನ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿತ್ತು.

ಅಬ್ಬರಿಸಲು ರೆಡಿಯಾಗಿದ್ದಾರೆ ಕಿಂಗ್‌ ಕೊಹ್ಲಿ

ಕೆಲ ದಿನಗಳ ವಿಶ್ರಾಂತಿಯ ಬಳಿಕ ತಂಡಕ್ಕೆ ಮರಳಿರುವ ಕಿಂಗ್‌ ಕೊಹ್ಲಿ ಮತ್ತೆ ಅಬ್ಬರಿಸಲು ಸಿದ್ಧತೆ ನಡೆಸಿದ್ದಾರೆ. ಹೊಸ ವರ್ಷದಲ್ಲಿ ಹೊಸ ಭರವಸೆಯನ್ನು ಮೂಡಿಸುವ ವಿಶ್ವಾಸದಲ್ಲಿದ್ದಾರೆ. ವಿರಾಟ್ ಬಳಿ ಹಲವು ಬ್ಯಾಟ್ ಗಳಿವೆ. ನಾವು ಬ್ರ್ಯಾಂಡ್ ಬಗ್ಗೆ ಹೇಳುವುದಾದರೆ ಅವರು ಎಂಆರ್‌ಎಫ್‌ ನ ಬ್ರ್ಯಾಂಡ್ ತಮ್ಮ ಬ್ಯಾಟ್‌ಗೆ ಸ್ಟಿಕರ್ ಅಟ್ಟಿಸಿಕೊಳ್ಳುತ್ತಾರೆ. ಕಾರಣ ಅವರಿಗೆ ಪ್ರಾಯೋಜಕತ್ವ ನೀಡುತ್ತಾರೆ. ಇದು ಅವರ ಬ್ಯಾಟ್‌ನ ಬ್ರಾಂಡ್ ಆಗಿ ತುಂಬಾ ದಿನಗಳಿಂದ ಉಳಿದಿದೆ.

ಈ ಬ್ಯಾಟ್‌ ಅನ್ನು ವಿಲೋ ಮರದ ಕಟ್ಟಿಗೆಯಿಂದ ತಯಾರಿಸಲಾಗುತ್ತದೆ. ವಿರಾಟ್ 10-12 ಧಾನ್ಯಗಳ ಇಂಗ್ಲಿಷ್ ವಿಲೋ ಬ್ಯಾಟ್ ಅನ್ನು ಬಳಸುತ್ತಾರೆ, ಇದು ಸುಮಾರು 1200 ಗ್ರಾಂ ತೂಕ ಇರುತ್ತದೆ. ವಿರಾಟ್ ಬಳಸುವ ಬ್ಯಾಟ್ ನ ಬೆಲೆ 17 ಸಾವಿರದಿಂದ ಆರಂಭವಾಗುತ್ತದೆ. ಇದು 23-25 ​​ಸಾವಿರದವರೆಗೆ ಇದೆ ಎಂದು ಅಂದಾಜಿಸಲಾಗಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *