ಏಕದಿನ ಕ್ರಿಕೆಟ್‌ನಲ್ಲಿ 46ನೇ ಶತಕ ಸಿಡಿಸಿದ ಕಿಂಗ್‌ ಕೊಯ್ಲಿ: ಸಚಿನ್‌ ಹೆಸರಿನಲ್ಲಿದ್ದ ಎರಡು ದಾಖಲೆಗಳು ವಿರಾಟ್‌ ತೆಕ್ಕೆಗೆ

ಏಕದಿನ ಕ್ರಿಕೆಟ್‌ನಲ್ಲಿ 46ನೇ ಶತಕ ಸಿಡಿಸಿದ ಕಿಂಗ್‌ ಕೊಯ್ಲಿ: ಸಚಿನ್‌ ಹೆಸರಿನಲ್ಲಿದ್ದ ಎರಡು ದಾಖಲೆಗಳು ವಿರಾಟ್‌ ತೆಕ್ಕೆಗೆ

ನ್ಯೂಸ್ ಆ್ಯರೋ: ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಸ್ಫೋಟಕ ದಾಂಡಿಗ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ 46ನೇ ಶತಕ ಸಿಡಿಸಿದ್ದಾರೆ.

ತಿರುವನಂತಪುರಂನ ಗ್ರೀನ್ ಫೀಲ್ಡ್ ಸ್ಟೇಡಿಯಂನಲ್ಲಿ ಕೊಹ್ಲಿ ಶ್ರೀಲಂಕಾ ಬೌಲರ್ ಗಳನ್ನು ಮನಮಂದಿತೆ ದಂಡಿಸಿದರು. 110 ಎಸೆತಗಳನ್ನು ಎದುರಿಸಿದ ಕಿಂಗ್‌ ಕೊಹ್ಲಿ ಅಜೇಯ 166 ರನ್ ಚಚ್ಚಿದರು. ಕೊಹ್ಲಿ ಬ್ಯಾಟ್‌ನಿಂದ 13 ಬೌಂಡರಿ ಮತ್ತು 8 ಸಿಕ್ಸರ್‌ ಮೂಡಿಬಂದವು.

ಕಿಂಗ್‌ ಕೊಯ್ಲಿ ವಿರಾಟ್ ತಮ್ಮ 46ನೇ ಶತಕದಿಂದಾಗಿ ‘ಕ್ರಿಕಟ್‌ ದೇವರು’ ಸಚಿನ್ ತೆಂಡೂಲ್ಕರ್ ಅವರ ಎರಡು ದೊಡ್ಡ ದಾಖಲೆಗಳನ್ನು ಮುರಿದಿದ್ದಾರೆ. ಒಂದು ತಂಡದ ವಿರುದ್ಧ ಅತಿ ಹೆಚ್ಚು ಏಕದಿನ ಶತಕಗಳನ್ನು(10) ಮತ್ತು ತವರಿನಲ್ಲಿ(21) ಅತಿ ಹೆಚ್ಚು ಶತಕಗಳನ್ನು ಗಳಿಸಿ ಸಚಿನ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದಾರೆ.

ಕೊಹ್ಲಿ ಮತ್ತು ಸಚಿನ್ ಅವರು ತಮ್ಮ 46ನೇ ಏಕದಿನ ಶತಕದ ಇನ್ನಿಂಗ್ಸ್‌ನಲ್ಲಿ 150ಕ್ಕಿಂತ ಹೆಚ್ಚು ವೈಯಕ್ತಿಕ ರನ್ ಗಳಿಸಿದ್ದಾರೆ. ಅಲ್ಲದೆ ಇಬ್ಬರೂ ಬ್ಯಾಟ್ಸ್ ಮನ್ ಗಳು ಅಜೇಯವಾಗಿ ಪೆವಿಲಿಯನ್ ಗೆ ಮರಳಿರುವುದು ವಿಶೇಷ. 2010ರ ಫೆಬ್ರವರಿಯಲ್ಲಿ ಸಚಿನ್, ದಕ್ಷಿಣ ಆಫ್ರಿಕಾ ವಿರುದ್ಧ ಗ್ವಾಲಿಯರ್ ಮೈದಾನದಲ್ಲಿ ತಮ್ಮ 46ನೇ ಶತಕವನ್ನು ಗಳಿಸಿದರು. ಸಚಿನ್ 147 ಎಸೆತಗಳಲ್ಲಿ 25 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ಅಜೇಯ 200 ರನ್ ಪೇರಿಸಿದ್ದರು. ಇನ್ನು ಪುರುಷರ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಸಚಿನ್ ಪಾತ್ರರಾಗಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ 2008ರಲ್ಲಿ ಪದಾರ್ಪಣೆ ಮಾಡಿದ್ದ ಕೊಹ್ಲಿ ಇಲ್ಲಿಯವರೆಗೆ 258 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು 58.24ರ ಸರಾಸರಿಯಲ್ಲಿ 12,754 ರನ್ ಗಳಿಸಿದ್ದಾರೆ. ಅವರು 64 ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಮತ್ತೊಂದೆಡೆ, ಸಚಿನ್ 1989ರಲ್ಲಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದ್ದು, 2013ರಲ್ಲಿ ಕೊನೆಗೊಂಡಿತು. ಸಚಿನ್ 463 ಏಕದಿನ ಗಳಲ್ಲಿ 44.83 ಸರಾಸರಿಯಲ್ಲಿ 18,426 ರನ್ ಗಳಿಸಿದ್ದಾರೆ. 49 ಏಕದಿನ ಶತಕಗಳನ್ನು ಹೊರತುಪಡಿಸಿ, 96 ಅರ್ಧಶತಕಗಳನ್ನು ಗಳಿಸಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *