ಸಮುದ್ರದಲ್ಲಿ ಬರೋಬ್ಬರಿ 36 ಕಿ.ಮೀ. ಈಜಿದ ಸುಚೇತಾ – ಸಮುದ್ರದ ನಡುವಲ್ಲಿ ಈಜುವ ವಿಡಿಯೋ ವೈರಲ್

ಸಮುದ್ರದಲ್ಲಿ ಬರೋಬ್ಬರಿ 36 ಕಿ.ಮೀ. ಈಜಿದ ಸುಚೇತಾ – ಸಮುದ್ರದ ನಡುವಲ್ಲಿ ಈಜುವ ವಿಡಿಯೋ ವೈರಲ್

ನ್ಯೂಸ್ ಆ್ಯರೋ‌ : ಈಜುಗಾರ್ತಿ ಸುಚೇತಾ ದೇಬ್ ಬರ್ಮನ್ ವರ್ಲಿ ಸಮುದ್ರದ ಲಿಂಕ್ ನಿಂದ ಮುಂಬಯಿಯ ಗೇಟ್ ವೇ ಆಫ್ ಇಂಡಿಯಾ ತನಕ ಈಜಿ ಗಮನ ಸೆಳೆದಿದ್ದಾರೆ. ಅವರು ಸುಮಾರು 36 ಕಿ.ಮೀ. ಈಜಿದ್ದಾರೆ. ಈಜುತ್ತಿರುವ ವೀಡಿಯೋವನ್ನು ಸುಚೇತಾ ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿದೆ.

ನೆಟ್ಟಿಗರಿಂದ ಮೆಚ್ಚುಗೆ

ಸುಚೇತಾ ಶೇರ್ ಮಾಡಿಕೊಂಡಿರುವ ವೀಡಿಯೋವನ್ನು ಈಗಾಗಲೇ 6 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಸುಮಾರು 62 ಸಾವಿರ ಮಂದಿ ಲೈಕ್ ಮಾಡಿದ್ದಾರೆ. ಹಲವರು ಈಜುಗಾರ್ತಿಯ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅನೇಕರು ಸ್ಫೂರ್ತಿದಾಯಕವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಕೆಲವರು ತಮ್ಮ ಸಂದೇಹವನ್ನೂ ವ್ಯಕ್ತಪಡಿಸಿದ್ದಾರೆ. ಬಿಸಿಲಿನಿಂದ ಚರ್ಮ ಕಪ್ಪಾಗಿದೆ. ಬೆನ್ನು ಸ್ವಲ್ಪ ಸುಟ್ಟಿದೆ ಎಂದು ಪ್ರಶ್ನೆಯೊಂದಕ್ಕೆ ಸುಚೇತಾ ಉತ್ತರಿಸಿದ್ದಾರೆ. ಈಜುಗಾರರೊಬ್ಬರು ಕಮೆಂಟ್ ಮಾಡಿ, 36 ಕಿ.ಮೀ. ಈಜಬೇಕೆಂದರೆ ಅದರ ಹಿಂದಿನ ತಯಾರಿ ಎಷ್ಟು ಕಷ್ಟ ಎನ್ನುವುದು ಅರ್ಥವಾಗುತ್ತದೆ ಎಂದಿದ್ದಾರೆ.

ಶಾರ್ಕ್, ಮೊಸಳೆ ನಿಮ್ಮನ್ನು ಹಿಡಿಯದಷ್ಟು ವೇಗವಾಗಿ ಸಾಗಿದಿರೆ? ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ. ಹಲವರಿಗೆ ಸುಚೇತಾ ಸಾಧನೆ ಬಗ್ಗೆ ಹೆಮ್ಮೆ ಇದೆಯಂತೆ. ಒಟ್ಟಿನಲ್ಲಿ ಸುಚೇತಾ ತಮ್ಮ ಸಾಹಸದ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *