ಮಹಿಳಾ ಟಿ20 ವಿಶ್ವಕಪ್‌ಗೆ ದಿನಗಣನೆ: ಬಿಸಿಸಿಐಯಿಂದ ಭಾರತ ತಂಡದ ಆಟಗಾರರ ಪಟ್ಟಿ ಪ್ರಕಟ

ಮಹಿಳಾ ಟಿ20 ವಿಶ್ವಕಪ್‌ಗೆ ದಿನಗಣನೆ: ಬಿಸಿಸಿಐಯಿಂದ ಭಾರತ ತಂಡದ ಆಟಗಾರರ ಪಟ್ಟಿ ಪ್ರಕಟ

ನ್ಯೂಸ್ ಆ್ಯರೋ : ಐಸಿಸಿ T20 ಮಹಿಳಾ ವಿಶ್ವಕಪ್‌ ಫೆ 10ರಿಂದ 26ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಸ್ಪರ್ಧಿಸಲಿರುವ 15 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

2021ರ ಅಕ್ಟೋಬರ್ ನಲ್ಲಿ ಕೊನೆಯ ಬಾರಿಗೆಟೀಂ ಇಂಡಿಯಾ ಪರ ಆಡಿದ ಸ್ಟಾರ್ ವೇಗಿ ಶಿಖಾ ಪಾಂಡೆ 14 ತಿಂಗಳ ಅಂತರದ ನಂತರ ಟೀಂ ಇಂಡಿಯಾಕ್ಕೆ ಮತ್ತೇ ಪುನರಾಗಮನ ಮಾಡಲಿದ್ದಾರೆ. 33 ವರ್ಷದ ವೇಗಿ 3 ಟೆಸ್ಟ್, 55 ಏಕದಿನ ಹಾಗೂ 56 ಟಿ20 ಪಂದ್ಯಗಳನ್ನು ಆಡಿದ್ದಾರೆ.

ಟಿ20 ವಿಶ್ವಕಪ್ ಫೆಬ್ರವರಿ 10 ರಂದು ಆರಂಭವಾಗಲಿದ್ದು, ಭಾರತ ತನ್ನ ಮೊದಲ ಪಂದ್ಯವನ್ನು ಫೆಬ್ರವರಿ 12 ರಂದು ಪಾಕಿಸ್ತಾನದ ವಿರುದ್ಧ ಸೆಣೆಸಡಾಲಿದೆ. ಗ್ರೂಪ್-2ರಲ್ಲಿ ಟೀಂ ಇಂಡಿಯಾ ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧ ಪೈಪೋಟಿ ನಡೆಸಲಿದೆ.

2023ರ ಟಿ20 ವಿಶ್ವಕಪ್‌ ಭಾರತ ತಂಡದಲ್ಲಿರುವವರ ಹೆಸರು: ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪ ನಾಯಕಿ), ಶೆಫಾಲಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ.

ಭಾರತ ತಂಡ ಆಟವಾಡುವ ದಿನದ ವೇಳಾಪಟ್ಟಿ

  • ಫೆಬ್ರವರಿ 12 ರಂದು ಭಾರತ vs ಪಾಕಿಸ್ತಾನ
  • ಫೆಬ್ರವರಿ 15 ರಂದು ಭಾರತ vs ವೆಸ್ಟ್ ಇಂಡೀಸ್
  • ಫೆಬ್ರವರಿ 18 ರಂದು ಭಾರತ vs ಇಂಗ್ಲೆಂಡ್
  • ಫೆಬ್ರವರಿ 20 ರಂದು ಭಾರತ vs ಐರ್ಲೆಂಡ್

2023ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ತ್ರಿಕೋನ ಸರಣಿಯನ್ನು ಆಡಲಿದೆ. ಜನವರಿ 19 ರಿಂದ ಫೆಬ್ರವರಿ 3 ರವರೆಗೆ ಈ ಸರಣಿ ನಡೆಯಲಿದೆ. ಈ ತ್ರಿಕೋನ ಸರಣಿಗೂ ಆಯ್ಕೆ ಸಮಿತಿ ಮಹಿಳಾ ತಂಡವನ್ನು ಆಯ್ಕೆ ಮಾಡಿದೆ.

ತ್ರಿಪಕ್ಷೀಯ ಸರಣಿಗಾಗಿ ಭಾರತ ತಂಡ

ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪ ನಾಯಕಿ), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಜೇಶ್ವರಿ ಗಾಯಕ್ವಾಡ್, ರಾಧಾ ಯಾದವ್, ರೇಣುಕಾ ಠಾಕೂರ್, ಮೇಘನಾ ಸಿಂಗ್, ಅಂಜಲಿ ಸರ್ವಾಣಿ, ಸುಷ್ಮಾ ವರ್ಮಾ (ವಿಕೆಟ್ ಕೀಪರ್), ಅಮಂಜೋತ್ ಕೌರ್, ಪೂಜಾ ವಸ್ತ್ರಾಕರ್, ಸಬ್ನಾನಿ ಮೇಘನಾ, ಸ್ನೇಹ ರಾಣಾ, ಶಿಖಾ ಪಾಂಡೆ.

  • ಜನವರಿ 19 ರಂದು ಭಾರತ-ದಕ್ಷಿಣ ಆಫ್ರಿಕಾ
  • ಜನವರಿ 23 ರಂದು ಭಾರತ-ವೆಸ್ಟ್ ಇಂಡೀಸ್
  • ಜನವರಿ 28 ರಂದು ಭಾರತ-ದಕ್ಷಿಣ ಆಫ್ರಿಕಾ
  • ಜನವರಿ 30 ರಂದು ಭಾರತ-ವೆಸ್ಟ್ ಇಂಡೀಸ್

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *