ಭಾರತೀಯ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷನಿಂದಲೇ ಲೈಂಗಿಕ ಕಿರುಕುಳ – ತಿರುಗಿಬಿದ್ದ ಮಹಿಳಾ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್, ಸೋನಂ ಮಲಿಕ್..!!

ಭಾರತೀಯ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷನಿಂದಲೇ ಲೈಂಗಿಕ ಕಿರುಕುಳ – ತಿರುಗಿಬಿದ್ದ ಮಹಿಳಾ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್, ಸೋನಂ ಮಲಿಕ್..!!

ನ್ಯೂಸ್ ಆ್ಯರೋ : ಭಾರತೀಯ ಕುಸ್ತಿ ರಂಗಕ್ಕೆ ಕ್ರೀಡಾ ಜಗತ್ತಿನಲ್ಲಿ ವಿಶೇಷವಾದ ಸ್ಥಾನಮಾನವಿದೆ. ಆದರೆ ಇದೇ ಕುಸ್ತಿ ಅಂಗಳದಲ್ಲೀಗ ಲೈಂಗಿಕ ಕಿರುಕುಳದ ಆರೋಪ ಕೇಳಿ ಬರುತ್ತಿದೆ. ಹೌದು, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಾರೆ ಎಂದು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಗಂಭೀರ ಆರೋಪ ಮಾಡಿ ನ್ಯಾಯಕ್ಕಾಗಿ ಹೋರಾಟಕ್ಕಿಳಿದಿದ್ದಾರೆ.

ಭಾರತೀಯ ಕುಸ್ತಿ ರಂಗದ ಮಹಿಳಾ ಸ್ಟಾರ್ ಕುಸ್ತಿಪಟುಗಳಾದ ಸೋನಮ್ ಮಲಿಕ್, ಬಜರಂಗ್ ಪುನಿಯಾ, ಸಂಗೀತಾ ಫೋಗಟ್, ಅಂಶು ಮಲಿಕ್ ಸೇರಿದಂತೆ ಇತರರು ಭಾರತೀಯ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ಭಾರತದ ರಾಜಧಾನಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಕ್ರೀಡಾ ಸಂಸ್ಥೆ ಹಾಗೂ ಡಬ್ಯುಎಫ್ ಮುಖ್ಯಸ್ಥನ ವಿರುದ್ಧ ಲೈಂಗಿಕ ಕಿರುಕುಳದ ಆರೋಪದೊಂದಿಗೆ ದೇಶದ ಸ್ಟಾರ್ ಮಹಿಳಾ ಕಿಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ವಿನೇಶ್ ಫೋಗಟ್ ಬ್ರಿಜ್ ಭೂಷಣ್ ವಿರುದ್ಧ ಆರೋಪ ಮಾಡಿದ್ದಾರೆ.

ಭಾರತೀಯ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಅವರಿಂದ ನಾನು ಮಾನಸಿಕ ಕಿರುಕುಳ ಅನುಭವಿಸಿದ್ದಷ್ಟೆ ಅಲ್ಲದೇ, ಆತ್ಮಹತ್ಯೆಗೂ ಯೋಚಿಸಿದ್ದೆ. ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಿದ್ದಕ್ಕಾಗಿ ನನ್ನನ್ನು ಈ ಹಿಂದೆ ಮೌನವಾಗಿಸಿದ್ದರು ಎಂದು ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಸ್ವರ್ಣ ವಿಜೇತ ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಸುಮಾರು 32 ಜನ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿರುವ ಸಂಧರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಫೋಗಟ್ ಈ ಆರೋಪ ಮಾಡಿ ಕಣ್ಣೀರಿಟ್ಟರು. ‘ಭಾರತೀಯ ರೆಸ್ಲಿಂಗ್ ಫೆಡರೇಶನ್ ಕಾರ್ಯವೈಖರಿಯಲ್ಲಿ ಬದಲಾವಣೆ ತರಬೇಕು ಜೊತೆಗೆ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ವಿಚಾರಣೆ ಕೈಗೊಂಡು ಸೂಕ್ತ ಕ್ರಮ ಜರುಗಿಸುವಂತೆ’ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರು.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *