Asian Games 2023 : 48 ಎಸೆತಗಳಲ್ಲಿ ಶತಕ ಬಾರಿಸಿದ ಯಶಸ್ವಿ ಜೈಸ್ವಾಲ್ – ನೇಪಾಳ ವಿರುದ್ಧ 200 ರನ್ ಗಡಿ ದಾಟಿದ ಟೀಂ ಇಂಡಿಯಾ..!!

Asian Games 2023 : 48 ಎಸೆತಗಳಲ್ಲಿ ಶತಕ ಬಾರಿಸಿದ ಯಶಸ್ವಿ ಜೈಸ್ವಾಲ್ – ನೇಪಾಳ ವಿರುದ್ಧ 200 ರನ್ ಗಡಿ ದಾಟಿದ ಟೀಂ ಇಂಡಿಯಾ..!!

ನ್ಯೂಸ್ ಆ್ಯರೋ‌ : ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿರುವ ಋತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡವು ಏಷ್ಯನ್ ಕ್ರೀಡಾಕೂಟದ ಟಿ20 ಕ್ರಿಕೆಟ್‌ ನಲ್ಲಿ ಮಂಗಳವಾರ ಕಣಕ್ಕಿಳಿದಿದ್ದು, ಯಶಸ್ವಿ ಜೈಸ್ವಾಲ್ ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಎರಡನೇ ವೇಗದ ಶತಕ ಬಾರಿಸಿದ ದಾಖಲೆ ಬರೆದ ಯಶಸ್ವಿ ಜೈಸ್ವಾಲ್ 48 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ.

ಈ ಮೊದಲು ರೋಹಿತ್ ಶರ್ಮಾ 35 ಎಸೆತಗಳಲ್ಲಿ ಶ್ರೀಲಂಕಾ ವಿರುದ್ಧ ಶತಕ ಬಾರಿಸಿರುವುದು ದಾಖಲೆಯಾಗಿದೆ. ಇಂದಿನ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಏಷ್ಯನ್ ಗೇಮ್ಸ್ ನಲ್ಲಿ ಮೊದಲ ಶತಕ ಬಾರಿಸಿದ ಭಾರತೀಯ ಎನಿಸಿಕೊಂಡರು.

ನೇಪಾಳ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿದೆ. ರಿಂಕು ಸಿಂಗ್ 15 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಸಹಿತ 37 ರನ್ ಬಾರಿಸಿದರೆ ನಾಯಕ ರುತುರಾಜ್ ಗಾಯಕ್ವಾಡ್, ಶಿವಮ್ ದುಬೆ ತಲಾ 25 ರನ್ ಬಾರಿಸಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *