Yuvraj Singh : ಹೆಣ್ಣು ಮಗುವಿಗೆ ಜನ್ಮ ನೀಡಿದ ಹೇಜಲ್ ಕೀಚ್ – ಎರಡನೇ ಮಗುವಿಗೆ ತಂದೆಯಾದ ಯುವಿ

Yuvraj Singh : ಹೆಣ್ಣು ಮಗುವಿಗೆ ಜನ್ಮ ನೀಡಿದ ಹೇಜಲ್ ಕೀಚ್ – ಎರಡನೇ ಮಗುವಿಗೆ ತಂದೆಯಾದ ಯುವಿ

ನ್ಯೂಸ್ ಆ್ಯರೋ : ಭಾರತ ಕ್ರಿಕೆಟ್​ ತಂಡದ ಮಾಜಿ ಆಲ್​ರೌಂಡರ್​, ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವರಾಜ್​ ಸಿಂಗ್​ ಅವರ ಪತ್ನಿ ಹೇಜಲ್​ ಕೀಚ್​ ಆಗಸ್ಟ್​ 25ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿಯನ್ನು ಸ್ವತಃ ಮಾಜಿ ಕ್ರಿಕೆಟಿಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಿದ್ರೆಯಿಲ್ಲದ ರಾತ್ರಿಗಳು ಹೆಚ್ಚು ಸಂತೋಷಕರವಾಗಿದ್ದು, ನಮ್ಮ ಪುಟ್ಟ ರಾಜಕುಮಾರಿ ಔರಾಳನ್ನು ನಾವು ಸ್ವಾಗತಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಯುವರಾಜ್​ ಸಿಂಗ್​-ಹೇಜಲ್​ ಕೀಚ್​ 2016ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ವರ್ಷ ತಮ್ಮ ಮೊದಲ ಗಂಡುಮಗು ಓರಿಯನ್‌ಗೆ ಜನ್ಮ ನೀಡಿದ್ದರು.

ಭಾರತ ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರೆಂದು ಗುರುತಿಸಲ್ಪಟ್ಟಿರುವ ಯುವರಾಜ್ ಸಿಂಗ್ ಭಾರತ ತಂಡಕ್ಕಾಗಿ ಎಲ್ಲಾ ಸ್ವರೂಪಗಳಲ್ಲಿ 402 ಪಂದ್ಯಗಳನ್ನು ಆಡಿದ್ದಾರೆ. ಇನ್ನು 40 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅಲ್ಲಿ 33.92ರ ಸರಾಸರಿಯಲ್ಲಿ 1900 ರನ್ ಗಳಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ ನಿಜವಾಗಿಯೂ ಪ್ರವರ್ಧಮಾನಕ್ಕೆ ಬಂದಿದ್ದು ಏಕದಿನ ಕ್ರಿಕೆಟ್ ಸ್ವರೂಪದಲ್ಲಿ. ಅವರು ಆಡಿದ 304 ಪಂದ್ಯಗಳಲ್ಲಿ 36.ರ ಸರಾಸರಿಯಲ್ಲಿ 8701 ರನ್ ಬಾರಿಸಿದ್ದಾರೆ.
ಗಮನಾರ್ಹವಾಗಿ, ಯುವರಾಜ್ ಸಿಂಗ್ 14 ಶತಕಗಳು ಮತ್ತು 52 ಅರ್ಧ ಶತಕಗಳನ್ನು ಸಿಡಿಸಿದ್ದಾರೆ. ಇದು ಅವರ ಸ್ಥಿರ ಪ್ರದರ್ಶನವನ್ನು ಎತ್ತಿ ತೋರಿಸುತ್ತದೆ. ಇದೇ ವೇಳೆ 58 ಟಿ20 ಪಂದ್ಯಗಳಲ್ಲಿ 28.02ರ ಸರಾಸರಿಯಲ್ಲಿ 1177 ರನ್‌ಗಳನ್ನು ದಾಖಲಿಸಿರುವ ಯುವರಾಜ್ ಸಿಂಗ್ ಚುಟುಕು ಸ್ವರೂಪದಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *