ಶಕ್ತಿ ಯೋಜನೆ ಜಾರಿ ಹಿನ್ನೆಲೆ – ಹೆಚ್ಚುವರಿ 1,894 ಬಸ್ ಖರೀದಿಗೆ ಚಿಂತನೆ

ಶಕ್ತಿ ಯೋಜನೆ ಜಾರಿ ಹಿನ್ನೆಲೆ – ಹೆಚ್ಚುವರಿ 1,894 ಬಸ್ ಖರೀದಿಗೆ ಚಿಂತನೆ

ನ್ಯೂಸ್ ಆ್ಯರೋ‌ : ರಾಜ್ಯ ಸರಕಾರವು ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಬಹು ನಿರೀಕ್ಷಿತ ಶಕ್ತಿ ಯೋಜನೆಗೆ ರವಿವಾರ ಚಾಲನೆ ನೀಡಿದೆ. ರಾಜ್ಯ ಸಾರಿಗೆಯ ನಾಲ್ಕು ನಿಗಮಗಳಾದ ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ., ಎನ್.ಡಬ್ಲ್ಯು.ಕೆ.ಎಸ್.ಆರ್.ಟಿ.ಸಿ., ಕೆ.ಕೆ.ಆರ್.ಟಿ.ಸಿ. ಬಸ್ ಗಳಲ್ಲಿ ಈ ಸೌಲಭ್ಯ ಲಭ್ಯವಿದ್ದು, ಇದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನಲೆಯಲ್ಲಿ ಈ ವರ್ಷ 1,894 ಬಸ್ ಗಳನ್ನು ಖರೀದಿಸಲು ಚಿಂತನೆ ನಡೆದಿದೆ.

ಹೆಚ್ಚುವರಿ ಸಿಬ್ಬಂದಿ ನೇಮಕ

ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಸಾರಿಗೆ ನಿಗಮ ಮುಂದಾಗಿದೆ. ಅಲ್ಲದೆ ಮಹಿಳಾ ಪ್ರಯಾಣಿಕರು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿರುವ ಕೆಲವು ಮಾರ್ಗಗಳಲ್ಲಿ ಬೇಡಿಕೆಯನ್ನು ಪೂರೈಸಲು ವೇಳಾಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಸದ್ಯದ ಸಾಮರ್ಥ್ಯ

ಪ್ರಸ್ತುತ ನಾಲ್ಕು ನಿಗಮಗಳು 1,04,450 ಸಿಬ್ಬಂದಿ ಮತ್ತು ರಾಜ್ಯದಾದ್ಯಂತ 23,989 ಬಸ್‌ಗಳನ್ನು ಹೊಂದಿದೆ. ಒಂದು ದಿನಕ್ಕೆ ಈ ಬಸ್ ಗಳು ಸರಾಸರಿ 65.02 ಲಕ್ಷ ಕಿ.ಮೀ. ಸಂಚರಿಸುತ್ತವೆ. ಶಕ್ತಿ ಯೋಜನೆಗೆ ಜಾರಿಗೆ ಸರಕಾರಕ್ಕೆ ಹೆಚ್ಚುವರಿ ವಾರ್ಷಿಕ ಸುಮಾರು 4,051.56 ಕೋಟಿ ರೂ. ಹೊರೆ ಬೀಳುವ ಸಾಧ್ಯತೆ ಇದೆ.

ಶೂನ್ಯ ಟಿಕೆಟ್ ಅಥವಾ ಶಕ್ತಿ ಸ್ಮಾರ್ಟ್ ಕಾರ್ಡ್ ನೀಡಿದ ಡೇಟಾದ ಆಧಾರದ ಮೇಲೆ ನಿಗಮಗಳಿಗೆ ಉಚಿತ ಪ್ರಯಾಣದ ವೆಚ್ಚವನ್ನು ಸರಕಾರ ನೀಡುತ್ತದೆ. ವಿಶೇಷ ಅನುದಾನ ಮತ್ತು ಹಣಕಾಸಿನ ನೆರವಿನ ಹೊರತಾಗಿ ಬಸ್ ಪಾಸ್‌ಗಳಿಗೆ ಒದಗಿಸಲಾದ ಸಬ್ಸಿಡಿಯನ್ನು ಸರಕಾರವು ಎಂದಿನಂತೆ ಮರುಪಾವತಿ ಮಾಡುತ್ತದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *