ಮದ್ಯದ ಬೆಲೆ ಹೆಚ್ಚಿಸಿ ಲಾಭ ಗಳಿಸುವ ಸರ್ಕಾರದ ಆಸೆಗೆ ತಣ್ಣೀರು – ಕುಡಿಯೋದೇ ಕಡಿಮೆ ಮಾಡಿದ ಮದ್ಯಪ್ರಿಯರು, 15% ಆದಾಯ ಗೋತಾ..!!

ಮದ್ಯದ ಬೆಲೆ ಹೆಚ್ಚಿಸಿ ಲಾಭ ಗಳಿಸುವ ಸರ್ಕಾರದ ಆಸೆಗೆ ತಣ್ಣೀರು – ಕುಡಿಯೋದೇ ಕಡಿಮೆ ಮಾಡಿದ ಮದ್ಯಪ್ರಿಯರು, 15% ಆದಾಯ ಗೋತಾ..!!

ನ್ಯೂಸ್‌ ಆ್ಯರೋ : ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಬೆನ್ನಲ್ಲೇ ಸರ್ಕಾರ ಮದ್ಯದ ಬೆಲೆಯಲ್ಲಿ ಏಕಾಏಕಿ ಬೆಲೆ ಏರಿಕೆ ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿತ್ತು. ಇದೀಗ ನಿರಂತರ ಬೆಲೆ ಏರಿಕೆಯಿಂದ ಮದ್ಯಪ್ರಿಯರು ಎಣ್ಣೆ ಖರೀದಿಸಲು ನಿರಾಸಕ್ತಿ ತೋರಿದ್ದು, ಇದರಿಂದ ಇದೀಗ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ.

ಭಾರತೀಯ ಮದ್ಯ ಮಾರಾಟ ಪ್ರಮಾಣದಲ್ಲಿ ಶೇ.15ರಷ್ಟು ಕುಸಿತವಾಗಿದ್ದು, ಇದರಿಂದಾಗಿ ಮದ್ಯ ಮಾರಾಟದಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಬಿಯರ್ ಮಾರಾಟದಲ್ಲಿ ಅಂತಹ ವ್ಯತ್ಯಯ ಕಂಡುಬಂದಿಲ್ಲ.

ರಾಜ್ಯ ಪಾನೀಯ ನಿಗಮಕ್ಕೆ ಲಿಕ್ಕರ್‌ಗೆ ಸಲ್ಲಿಸುವ ಖರೀದಿ ಬೇಡಿಕೆ ಇಳಿಕೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಪ್ರತಿ ತಿಂಗಳು ಎರಡೂವರೆ ಸಾವಿರ ಕೋಟಿ ಆದಾಯ ಬರುತ್ತಿತ್ತು. ಈ ಆಗಸ್ಟ್‌ನಲ್ಲಿ 962 ಕೋಟಿ ಮಾತ್ರ ಸಂಗ್ರಹವಾಗಿದೆ.

ಮಾರಾಟದಲ್ಲಿ ಇಳಿಕೆಯಾದ ಪ್ರಮಾಣ:

2022-ಆಗಸ್ಟ್: ಸ್ವದೇಶಿ ಬ್ರ್ಯಾಂಡ್ 25.50 ಲಕ್ಷ ಬಾಕ್ಸ್, ಬಿಯರ್ 10.34 ಲಕ್ಷ ಬಾಕ್ಸ್ ಮಾರಾಟ.

2023 ಆಗಸ್ಟ್: ದೇಶಿ ಬ್ರ್ಯಾಂಡ್ 21.87 ಲಕ್ಷ ಬಾಕ್ಸ್, ಬಿಯರ್ 12.52 ಲಕ್ಷ ಬಾಕ್ಸ್ ಮಾರಾಟ.

ಕಡಿಮೆ ದರದ ಬ್ರ್ಯಾಂಡ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಸ್ಕಾಚ್ ಪ್ರಿಯರು ಪ್ರೀಮಿಯರ್ ಬ್ರ್ಯಾಂಡ್‌ ಕಡೆಗೆ ವಾಲಿದ್ದಾರೆ. ಪ್ರೀಮಿಯಂ ಪ್ರಿಯರು ನಾರ್ಮಲ್ ಬ್ರ್ಯಾಂಡ್‌ಗೆ ಶಿಫ್ಟ್‌ ಆಗಿದ್ದಾರೆ. ಹೀಗಾಗಿ ಸರ್ಕಾರಿ ಆದಾಯ ಸಂಗ್ರಹದ ಮೇಲೂ ಪರಿಣಾಮ ಬೀರಿದೆ.

ಆದಾಯ ಎಷ್ಟೆಷ್ಟು?

  • ಏಪ್ರಿಲ್ 2,308 ಕೋಟಿ ರೂ.
  • ಮೇ 2,607 ಕೋಟಿ ರೂ.
  • ಜೂನ್ 3,549 ಕೋಟಿ ರೂ.
  • ಜುಲೈ 2,980 ಕೋಟಿ ರೂ.

ಐಎಂಎಲ್ ಮೇಲೆ ಶೇ.20 ರಷ್ಟು ಸುಂಕ ಹೆಚ್ಚಳ ಪರಿಣಾಮವಾದ ಪರಿಣಾಮ ಎಲ್ಲ 18 ಸ್ಲಾಬ್‌ಗಳ ಲಿಕ್ಕರ್ ದರ ಏರಿಕೆಯಾಗಿದೆ. ಪ್ರತಿ ಪೆಗ್‌ಗೆ 10 ರಿಂದ 20 ರೂಪಾಯಿ ಹೆಚ್ಚಳವಾಗಿದೆ. ಪ್ರತಿ ಬಾಟಲ್‌ಗೆ 50 ರಿಂದ 200 ರೂ. ಏರಿಕೆ ಕಂಡಿದೆ. ಪ್ರತಿ ತಿಂಗಳು ಸರಾಸರಿ 61 ಲಕ್ಷ ಟನ್ ಬಾಕ್ಸ್ ಮಾರಾಟವಾಗುತ್ತಿತ್ತು. ಬೆಲೆ ಏರಿಕೆಯಿಂದ ಆಗಸ್ಟ್‌ನಲ್ಲಿ 18.8 ಲಕ್ಷ ಟನ್ ಬಾಕ್ಸ್ ಮಾತ್ರ ಮಾರಾಟವಾಗಿದೆ.

ಈ ಬೆಳವಣಿಗೆಯಿಂದ ಸರ್ಕಾರಕ್ಕೆ ನಷ್ಟವಾಗಿದ್ದು, ಬೆಲೆ ಏರಿಕೆಯಿಂದ ಮದ್ಯಪ್ರಿಯರು ಮಾತ್ರ ಎಣ್ಣೆ ಖರೀದಿಸಲು ನಿರಾಸಕ್ತಿ ತೋರಿಸುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *