2024-25 ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – 121 ರಜಾದಿನ, ಬೇಸಿಗೆ ರಜೆಯಲ್ಲೂ ಬಿಸಿಯೂಟ

2024-25 ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – 121 ರಜಾದಿನ, ಬೇಸಿಗೆ ರಜೆಯಲ್ಲೂ ಬಿಸಿಯೂಟ

ನ್ಯೂಸ್ ಆ್ಯರೋ : 2023-24ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಿದ್ದು, ಮುಂದಿನ 2024-25 ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ/ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ.

ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯತರ ಚಟುವಟಿಕೆಗಳು, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ (ನೋ ಬ್ಯಾಗ್ ಡೇ) ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಚಟುವಟಿಕೆ ಬ್ಯಾಂಕ್ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ CCE (ಪರೀಕ್ಷೆಗಳು/ ಮೌಲ್ಯಂಕನ,ವಿಶ್ಲೇಷಣೆ) ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.

ಬೇಸಿಗೆ ರಜೆಯಲ್ಲೂ ಬಿಸಿಯೂಟ

ರಾಜ್ಯದ 223 ಬರ ಪೀಡಿತ ತಾಲೂಕುಗಳ 1ರಿಂದ 10ನೇ ತರಗತಿ ಸರ್ಕಾರಿ ಶಾಲೆ ಮಕ್ಕಳಿಗೆ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏಪ್ರಿಲ್ 11 ರಿಂದ ಮೇ 28 ರ ವರೆಗೆ 41 ದಿನಗಳ ಕಾಲ ಮಧ್ಯಾಹ್ನ 12:30 ರಿಂದ 2 ಗಂಟೆಯವರೆಗೆ ಬಿಸಿಯೂಟ ನೀಡಲಾಗುವುದು. ಉಷ್ಣಾಂಶ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಬೆಳಿಗ್ಗೆ 10 ರಿಂದ 11:30 ಅವಧಿಯಲ್ಲಿ ಬಿಸಿಯೂಟ ವಿತರಿಸಲಾಗುವುದು.

ಶಾಲಾ ಮಕ್ಕಳ ಮಾಹಿತಿಗೆ ಅನುಗುಣವಾಗಿ ಬಿಸಿಯೂಟ ಸಿದ್ದಪಡಿಸಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳ ಗಮನಕ್ಕೆ ತಂದು ಸ್ವೀಕರಿಸುವ ಒಪ್ಪಿಗೆ ಪತ್ರ ಪಡೆಯಬೇಕು. 250 ಕ್ಕಿಂತ ಹೆಚ್ಚು ಮಕ್ಕಳು ನಿರಂತರವಾಗಿ ಬಿಸಿಯೂಟ ಸ್ವೀಕರಿಸಲು ಹಾಜರಾಗುತ್ತಿದ್ದರೆ ಅಂತಹ ಶಾಲೆಗಳಿಗೆ ಒಬ್ಬರು ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಹೇಳಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *