ಇಂದೇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ..!? – ಶೇರ್ ಆಗ್ತಿರೋ ಸುತ್ತೋಲೆಯ ಬಗ್ಗೆ ಮಂಡಳಿ ಅಧ್ಯಕ್ಷೆ ಹೇಳೋದೇನು?

ಇಂದೇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ..!? – ಶೇರ್ ಆಗ್ತಿರೋ ಸುತ್ತೋಲೆಯ ಬಗ್ಗೆ ಮಂಡಳಿ ಅಧ್ಯಕ್ಷೆ ಹೇಳೋದೇನು?

ನ್ಯೂಸ್ ಆ್ಯರೋ : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಸಂಬಂಧ ಏಪ್ರಿಲ್ 3 ರ ಇಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ಆಯೋಜಿಸಿದೆ ಎಂದು ಹಬ್ಬಿರುವ ಮಾಹಿತಿ ಸುಳ್ಳು ಎಂದು ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಸ್ಪಷ್ಟಪಡಿಸಿದ್ದಾರೆ.

ಕಿಡಿಗೇಡಿಗಳು ಮಂಡಳಿ ಹೆಸರಿನಲ್ಲಿ ನಕಲಿ ಪತ್ರಿಕಾ ಹೇಳಿಕೆಯನ್ನು ಸೃಷ್ಟಿಸಿ ಸಾಮಾಜಕ ಜಾಲತಾಣದಲ್ಲಿ ಹರಿಬಿಟ್ಟು ಗೊಂದಲ ಸೃಷ್ಟಿಸುವ ಕೆಲಸ ಮಾಡಿದ್ದಾರೆ. ಮಂಡಳಿಯಿಂದ ಅಂತಹ ಯಾವುದೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಕಲಿ ಸುತ್ತೋಲೆಯಲ್ಲಿ ಇರೋದು ಏನು?
ಮಾರ್ಚ್ 20230 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ:11/03/2014 ರಿಂದ 21/03/2024ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯವಾದನ ಕಾರ್ಯವು ಮುಕ್ತಾಯವಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: (M11/2121 ರಂದು ಬೆಳಿಗ್ಗೆ 11:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಟಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ DO 03/04/20248 ವೀಕ್ಷಿಸಬಹುದಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *