
5ನೇ, 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
- ಕರ್ನಾಟಕ
- March 15, 2023
- No Comment
- 93
ನ್ಯೂಸ್ ಆ್ಯರೋ : ರದ್ದಾಗಿದ್ದ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಇಂದು ಇದರ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾ.27 ರಿಂದ ಪರೀಕ್ಷೆ ಆರಂಭವಾಗಲಿದ್ದು, ನಿಶ್ಚಿಂತೆಯಿಂದಿದ್ದ 5- 8 ನೇ ತರಗತಿಯ ಮಕ್ಕಳು ಪರೀಕ್ಷೆಗೆ ಮತ್ತೆ ತಯಾರಿ ನಡೆಸಬೇಕಾಗುತ್ತದೆ…!!