ಮನೆಯೊಳಗೆ 20 ಅಡಿ ಆಳದ ಗುಂಡಿ ತೋಡಿದ ಮಹಿಳೆ – ಜ್ಯೋತಿಷಿ ಹೇಳಿದ ಕಥೆ ನಂಬಿ ಕೆಡೋದು ಅಂದ್ರೆ ಇದೇನಾ??

ಮನೆಯೊಳಗೆ 20 ಅಡಿ ಆಳದ ಗುಂಡಿ ತೋಡಿದ ಮಹಿಳೆ – ಜ್ಯೋತಿಷಿ ಹೇಳಿದ ಕಥೆ ನಂಬಿ ಕೆಡೋದು ಅಂದ್ರೆ ಇದೇನಾ??

ನ್ಯೂಸ್ ಆ್ಯರೋ‌ : ಈ ವೈಜ್ಞಾನಿಕ ಯುಗದಲ್ಲೂ ನಿಧಿ ಆಸೆಗೆ ಬಲಿಯಾಗುವವರೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಇಲ್ಲಿದೆ. ಮಹಿಳೆಯೊಬ್ಬರು ನಿಧಿ ಆಸೆಗಾಗಿ ಜ್ಯೋತಿಷಿಯ ಮಾತು ನಂಬಿ ಮನೆಯೊಳಗೆ ಬರೋಬ್ಬರಿ 20 ಅಡಿ ಆಳದ ಗುಂಡಿ ತೋಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಜರುಗಿದೆ.

ಮಹಿಳೆ ಜ್ಯೋತಿಷಿ ಗುಂಡಿಗೆ ಬಿದ್ದಿದ್ದು ಹೇಗೆ?

ಮನೆಯ ವಾಸ್ತು ಸರಿ ಇಲ್ಲ ಎಂದು ವಿ.ಎಸ್.ದೊಡ್ಡಿ ಗ್ರಾಮದ ಭಾಗ್ಯ ಪರಿಹಾರ ಕೇಳಲು ಜ್ಯೋತಿಷಿ ಬಳಿಗೆ ತೆರಳಿದ್ದರು. ಆಗ ಮನೆಯಲ್ಲಿ ನಿಧಿ ಇದೆ ಎಂದು ಹೇಳಿ ಜ್ಯೋತಿಷಿ ನಂಬಿಸಿದ್ದರು. ಇದಕ್ಕಾಗಿ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಬೇಕೆಂದು ಹೇಳಿ ಮಹಿಳೆಯಿಂದ ಸಾವಿರಾರು ರೂ. ವಸೂಲಿ ಮಾಡಿದ್ದಾರೆ.

ಬಳಿಕ ಜ್ಯೋತಿಷಿ ಮನೆಯ ಒಳಗೆ 3 ಅಡಿ ಅಗಲದ 20 ಅಡಿ ಆಳದ ಗುಂಡಿ ತೋಡಿಸಿದ್ದಾರೆ. ವಾರದ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ವಿಷಯ ತಿಳಿದು ನೆರೆ ಮನೆಯವರು ರಾಮಾಪುರ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳುವಷ್ಟರಲ್ಲಿ ಜ್ಯೋತಿಷಿ ಪರಾರಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *