ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾಶ್ರೀ ವಿರುದ್ಧ ಮತ್ತೆ ಅರೆಸ್ಟ್ ವಾರಂಟ್ – ಶರಣರಿಗೆ ತಪ್ಪದ ಸಂಕಷ್ಟ, ಈ ಬಾರಿಯೂ ಜೈಲೇ ಗತಿಯಾಗುತ್ತಾ?

ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾಶ್ರೀ ವಿರುದ್ಧ ಮತ್ತೆ ಅರೆಸ್ಟ್ ವಾರಂಟ್ – ಶರಣರಿಗೆ ತಪ್ಪದ ಸಂಕಷ್ಟ, ಈ ಬಾರಿಯೂ ಜೈಲೇ ಗತಿಯಾಗುತ್ತಾ?

ನ್ಯೂಸ್ ಆ್ಯರೋ : ಮೊದಲನೇ ಪೊಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ ಮತ್ತೊಂದು ಕಂಟಕ ‌ಎದುರಾಗಿದ್ದು, 2ನೇ ಪೊಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ( ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದಷ್ಟೇ ಹೊರ ಬಂದಿರುವ ಚಿತ್ರದುರ್ಗದ ಮುರುಘಾಶ್ರೀಗೆ ಇದೀಗ ಮತ್ತೆ ಬಂಧನದ ಭೀತಿ ಶುರುವಾಗಿದೆ.

ಸದ್ಯ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ಅವರು ಕೋರ್ಟ್​ಗೆ ಆಗಮಿಸಿದ್ದು, ಕೋರ್ಟ್ ಆದೇಶ ಪಡೆದುಕೊಳ್ಳಲಿದ್ದಾರೆ. ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀ ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಮತ್ತೊಂದೆಡೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಅರೆಸ್ಟ್​ ವಾರೆಂಟ್​ಅನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಲು ಮುರುಘಾ ಶರಣರ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಇನ್ನು ಶ್ರೀಗಳ ವಿರುದ್ಧ ಕೋರ್ಟ್​ ಅರೆಸ್ಟ್ ವಾರೆಂಟ್ ಜಾರಿ ಮಾಡಿದ ಬೆನ್ನಲ್ಲೇ ಹರಿಹರದ ಮಾಜಿ ಶಾಸಕ ಶಿವಶಂಕರ್‌ ಅವರು ಮುರುಘಾಶ್ರೀ ಇರುವ ದಾವಣಗೆರೆಯಲ್ಲಿರುವ ವಿರಕ್ತ ಮಠಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೋರ್ಟ್‌ ವಾರಂಟ್ ಜಾರಿ ಮಾಡುತ್ತೆಂದು ನಿರೀಕ್ಷೆ ಇರಲಿಲ್ಲ. ಮುರುಘಾಶ್ರೀಗಳು ಆರೋಪಿ ಅಷ್ಟೇ, ಅಪರಾಧಿಯಲ್ಲ. ಮತ್ತೊಮ್ಮೆ ಸಂಕಷ್ಟ ಎದುರಾಗಿದ್ದು, ಎಲ್ಲವನ್ನೂ ಎದುರಿಸಲು ಮುರುಘಾ ಶ್ರೀಗಳು ಸಿದ್ಧರಿದ್ದಾರೆ ಎಂದಿದ್ದಾರೆ.

ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮರುಘಾಶ್ರೀ ವಿರುದ್ಧ ಎರಡು ಪೋಕ್ಸೋಗಳು ದಾಖಲಾಗಿದ್ದವು. ಬಳಿಕ ಒಂದನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಒಂದು ವರ್ಷ ಕಾಲ ಜೈಲಿನಲ್ಲಿದ್ದರು. ನಂತರ ಅವರಿಗೆ ಮೊದಲನೇ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, ನವೆಂಬರ್ 16ರಂದು ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆಯಾಗಿದ್ದರು. ಆದ್ರೆ, ಇದೀಗ ಅವರಿಗೆ ಎರಡನೇ ಪೋಕ್ಸೋ ಪ್ರಕರಣ ಕಂಟಕ ಎದುರಾಗಿದ್ದು, ಮತ್ತೆ ಜೈಲು ಸೇರುವ ಸಾಧ್ಯತೆಗಳಿವೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ 1ನೇ ಫೋಕ್ಸೋ ಕೇಸ್​ನಲ್ಲಿ ಜಾಮೀನು ಹಿನ್ನಲೆ ಹೈಕೋರ್ಟ್ ಆದೇಶದನ್ವಯ ಬಿಡುಗಡೆಗೆ ಸೂಚನೆ ನೀಡಿತ್ತು. ಆದರೆ, 2ನೇ ಫೋಕ್ಸೋ ಪ್ರಕರಣದಲ್ಲಿ ಬಾಡಿ ವಾರೆಂಟ್ ಹಿನ್ನೆಲೆ ಬಂಧನ ವಾರೆಂಟ್​ಗೆ ಸರ್ಕಾರಿ ವಕೀಲ ಜಗದೀಶ್ ಮನವಿ ಮಾಡಿದ್ದರು. ಈ ಬಗ್ಗೆ ಕೋರ್ಟ್​ನಲ್ಲಿ ಸರ್ಕಾರಿ ವಕೀಲ ಜಗದೀಶ್ ಪ್ರಶ್ನಿಸಿರುವ ಬೆನ್ನಲ್ಲೇ ಕಾರಾಗೃಹ ಇಲಾಖೆಗೆ ತನಿಖೆ ನಡೆಸಿ ವರದಿ‌ ನೀಡಲು 2ನೇ ಅಪರ ಜಿಲ್ಲಾ‌& ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾ ಅವರು ಆದೇಶಿಸಿದ್ದರು.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *