ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್ ನಲ್ಲಿ ಜೀವ ಬೆದರಿಕೆ ಆರೋಪ – ವಿವಾದಿತ ನಟ ಪ್ರಕಾಶ್ ರಾಜ್ ದೂರು, ಪ್ರಕರಣ ದಾಖಲು

ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್ ನಲ್ಲಿ ಜೀವ ಬೆದರಿಕೆ ಆರೋಪ – ವಿವಾದಿತ ನಟ ಪ್ರಕಾಶ್ ರಾಜ್ ದೂರು, ಪ್ರಕರಣ ದಾಖಲು

ನ್ಯೂಸ್ ಆ್ಯರೋ : ವಿವಾದಿತ ನಟ ಪ್ರಕಾಶ್ ರಾಜ್ ಯೂಟ್ಯೂಬ್ ಚಾನೆಲ್ ಟಿವಿ ವಿಕ್ರಮ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್ 14ರಂದು ಯೂಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ ಮಾಡಿರುವ ಎರಡು ವಿಡಿಯೋಗಳಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕುವ ಅಂಶ ಇದೆ ಎಂದು ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕಾಶ್ ರಾಜ್ ದೂರು ದಾಖಲು ಮಾಡಿದ್ದಾರೆ.

ಪ್ರಕಾಶ್ ರಾಜ್ ದೂರು ಧರಿಸಿ ಐಪಿಸಿ ಸೆಕ್ಷನ್ 506, 504, 505 (2) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್​ನಲ್ಲಿ ಪ್ರಸಾರವಾದ ಎರಡು ವಿಡಿಯೋಗಳ ಬಗ್ಗೆ ಪ್ರಕಾಶ್ ರಾಜ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಕಾಶ್ ರಾಜ್​ನಂಥವರನ್ನು ಮುಗಿಸಬೇಕಾ? ಹಿಂದೂಗಳು ಮಾಡಬೇಕಾಗಿರೋದು ಏನು? ಸನಾತನ ಧರ್ಮ ಹಿಂದೂಗಳೇ ಮಲಗೇ ಇರ್ತಿರಿ ಅಲ್ಲವಾ? ನಿಮ್ಮ ರಕ್ತ ಕುದಿಯಲ್ಲವಾ ಎಂದು ವಿಡಿಯೋದಲ್ಲಿ ಪ್ರಚೋದಕಾರಿ ಮಾತುಗಳನ್ನಾಡಲಾಗಿದೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿರುವ ಎರಡು ವಿಡಿಯೋಗಳಲ್ಲೂ ಸಹ ಜೀವ ಬೆದರಿಕೆ ಹಾಕುವ ಅಂಶ ಇದೆ. ಇದು ಪ್ರಕಾಶ್ ರಾಜ್ ಮತ್ತು ಕುಟುಂಬದವರಿಗೂ ಜೀವ ಬೆದರಿಕೆ ಎಂದು ನಟ ಆರೋಪಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *