ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು – ಈ ಬಾರಿ ದೂರು ನೀಡಿದ್ದು ಯಾರು ಗೊತ್ತಾ?

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು – ಈ ಬಾರಿ ದೂರು ನೀಡಿದ್ದು ಯಾರು ಗೊತ್ತಾ?

ನ್ಯೂಸ್ ಆ್ಯರೋ : ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿರುವ ಬೆನ್ನಲ್ಲೇ ಪ್ರಜ್ವಲ್ ವಿರುದ್ಧ ಸಾಲು ಸಾಲು ಅತ್ಯಾಚಾರ ಕೇಸ್ ಗಳು ದಾಖಲಾಗುತ್ತಿದ್ದು, ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಕಿಡ್ನ್ಯಾಪ್ ಕೇಸ್ ಪ್ರಕರಣದಲ್ಲಿ ಈಗಾಗಲೇ ಎಚ್.ಡಿ. ರೇವಣ್ಣ ಜೈಲಿನಲ್ಲಿದ್ದು, ಅದೇ ಪ್ರಕರಣದ ಸಂತ್ರಸ್ತೆಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ.

ಸದ್ಯ ಮೈಸೂರು ಜಿಲ್ಲೆಯ ಕೆ.ಆರ್.ನಗರ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು, ಪ್ರಕರಾ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯದ ಮುಂದೆ ಸೆಕ್ಷನ್ 164ರ ಅಡಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿದ್ದಾರೆ.

ಗನ್ನಿಕಡ ತೋಟದ ಮನೆಯಲ್ಲಿ ತೋಟದ ಕೆಲಸ ಮಾಡುವಾಗ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 9ರಂದು ಗನ್ನಿಕಡ ತೋಟದ ಮನೆಯಲ್ಲಿ ಪೊಲೀಸರು ಸ್ಥಳಮಹಜರು ನಡೆಸಿದ್ದಾರೆ. ಆದರೆ ಇದೇ ಸಂತ್ರಸ್ತೆಯನ್ನು ಅಪಹರಿಸಿರುವ ಆರೋಪದ ಮೇರೆಗೆ ಮಾಜಿ ಸಚಿವ ಜೈಲಿನಲ್ಲಿದ್ದು, ಕೋರ್ಟ್ ಜಾಮೀನು ನಿರಾಕರಿಸಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *