ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಬಿಗ್ ಶಾಕ್ – ಜನನ, ಮರಣ ವಿಳಂಬ ನೋಂದಣಿ ಶುಲ್ಕದಲ್ಲಿ ಭಾರೀ‌ ಹೆಚ್ಚಳ

ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಬಿಗ್ ಶಾಕ್ – ಜನನ, ಮರಣ ವಿಳಂಬ ನೋಂದಣಿ ಶುಲ್ಕದಲ್ಲಿ ಭಾರೀ‌ ಹೆಚ್ಚಳ

ನ್ಯೂಸ್ ಆ್ಯರೋ‌ : ಚುನಾವಣೆಗೂ ಮುನ್ನ ಹಲವು ಭಾಗ್ಯಗಳನ್ನು ಘೋಷಿಸಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ಸರ್ಕಾರ ಸದ್ಯ ಎಲ್ಲಾ ತೆರಿಗೆಗಳನ್ನು ಏಕಾಏಕಿ ಏರಿಸುತ್ತಿದೆ ಎಂಬ ಆರೋಪಗಳ‌ ಮಧ್ಯೆ ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಶಾಕ್ ನೀಡಿದೆ. ಜನನ, ಮರಣ ನೋಂದಣಿ ವಿಳಂಬ ಶುಲ್ಕದಲ್ಲಿ ಭಾರೀ ಏರಿಕೆ ಮಾಡಲು ನಿರ್ಧರಿಸಿದೆ.

ಸದ್ಯ ರಾಜ್ಯ ಸರ್ಕಾರವು ಜನನ, ಮರಣ ನೋಂದಣಿ ನಿಯಮಗಳು-1999 ರ ನಿಯಮಗಳ ಪ್ರಕಾರ ವಿಳಂಬ ನೋಂದಣಿಗೆ ಸಾರ್ವಜನಿಕರು ಹಾಲಿ ಪಾವತಿಸುತ್ತಿರುವ ಶುಲ್ಕವನ್ನೂ ಪರಿಷ್ಕರಿಸಿದೆ. ಅದರ ಪ್ರಕಾರ ಎರಡು, ಐದು ಹಾಗೂ ಹತ್ತು ರೂಪಾಯಿ ಇದ್ದ ಶುಲ್ಕವನ್ನು ಸಿಕ್ಕಾಪಟ್ಟೆ ಏರಿಸಿದೆ‌‌.

ಜನನ, ಮರಣ ಘಟಿಸಿದ 21 ದಿನಗಳ ನಂತರ ಹಾಗೂ 30 ದಿನಗಳ ಒಳಗಾಗಿ ನೋಂದಾಯಿಸುವ ವಿಳಂಬ ನೋಂದಣಿಗೆ ಹಾಲಿ ಇರುವ ವಿಳಂಬ ಶುಲ್ಕವನ್ನು 2 ರೂ. ಬದಲು 1000 ರೂ.ಗೆ 30 ದಿನಗಳ ನಂತರ 5 ರೂ. ಬದಲು 200 ರೂ. 1 ವರ್ಷ ಬಳಿಕ ನೋಂದಣಿಗೆ 10 ರೂ. ಬದಲು 500 ರೂ. ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಇನ್ಮುಂದೆ ಜನನ, ಮರಣ ನೋಂದಣಿಗೆ ಕೋರ್ಟ್ ಅಲೆಯಬೇಕಿಲ್ಲ. ಜನನ, ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗಳಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈವರೆಗೆ ಜನನ, ಮರಣ ನೋಂದಣಿ ಕಾಯಿದೆ ಸೆಕ್ಷನ್ 12(3) ಅಡಿ ವಿಳಂಬ ತಿದ್ದುಪಡಿ ಸೇರಿದಂತೆ ಯಾವುದೇ ತಾಗದೆಗಳಿದ್ದರೂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಥವಾ ಪ್ರೆಸಿಡೆನ್ಸ್ ಮ್ಯಾಜಿಸ್ಟ್ರೇಟ್ ಮಾತ್ರ ಆದೇಶ ಹೊರಡಿಸಬಹುದಾಗಿದ್ದು, ಬೇರೆ ಯಾರಿಗೂ ಅಧಿಕಾರ ಇರಲಿಲ್ಲ.

Related post

Loksabha Results : ಗೆಲುವಿನ ಖಾತೆ ತೆರೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ – ಚಾಮರಾಜನಗರ, ಹಾಸನ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

Loksabha Results : ಗೆಲುವಿನ ಖಾತೆ ತೆರೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ –…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಗೆಲುವಿನ ಖಾತೆ ತೆರೆದಿದೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರು ಒಂದು ಲಕ್ಷಕ್ಕೂ ಅಧಿಕ…
Loksabha Results : ಸರಳ ಬಹುಮತ ಗಳಿಸುವಲ್ಲಿ ಎಡವುತ್ತಾ ಬಿಜೆಪಿ? – ದಕ್ಷಿಣ ಕನ್ನಡ, ಬೆಂ.ಗ್ರಾಮಾಂತರ ಉಡುಪಿಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

Loksabha Results : ಸರಳ ಬಹುಮತ ಗಳಿಸುವಲ್ಲಿ ಎಡವುತ್ತಾ ಬಿಜೆಪಿ? –…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಎಣಿಕೆ ಕಾರ್ಯ ಇನ್ನೂ ಮುಂದುವರಿದಿದ್ದು, ಆಡಳಿತಾರೂಢ ಬಿಜೆಪಿ ಪಕ್ಷ ಸರಳ ಬಹುಮತದ ಕೊರತೆ ಎದುರಿಸುವ ಆತಂಕಕ್ಕೆ ಸಿಲುಕಿದೆ. ಎಲ್ಲಾ ಮತಗಟ್ಟೆ ಸಮೀಕ್ಷೆಗಳನ್ನು…
ದಿನ‌ ಭವಿಷ್ಯ 04-06-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 04-06-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಬಸುರಿಯು ನೆಲದ ಮೇಲೆ ನಡೆದುಕೊಂಡು ಹೋಗುವಾಗ ವಿಶೇಷ ಕಾಳಜಿ ವಹಿಸಬೇಕು. ಇನ್ನೂ ಸಂಬಳ ಪಡೆಯದವರು, ಇಂದು ಅವರು ಹಣಕ್ಕಾಗಿ ತುಂಬಾ ಚಿಂತೆ ಮಾಡಬಹುದು ಮತ್ತು ನಿಮ್ಮ ಸ್ನೇಹಿತರಿಂದ ಸಾಲವನ್ನು…

Leave a Reply

Your email address will not be published. Required fields are marked *