Gruha Lakshmi Scheme : ಜು. 19ರಂದು ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಯಾವೆಲ್ಲ ಷರತ್ತು ಅನ್ವಯ?

Gruha Lakshmi Scheme : ಜು. 19ರಂದು ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಯಾವೆಲ್ಲ ಷರತ್ತು ಅನ್ವಯ?

ನ್ಯೂಸ್ ಆ್ಯರೋ‌ : ರಾಜ್ಯದ ಬಹು ನಿರೀಕ್ಷಿತ ಗೃಹ ಲಕ್ಷ್ಮೀ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂ. ಜಮೆ ಮಾಡುವ ಈ ಯೋಜನೆಗೆ ಜು. 19ರಿಂದ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೇಬ್ಬಾಳ್ಕರ್ ಹೇಳಿದರು.

ಜು. 17 ಅಥವಾ ಜು. 19ರಂದು ಉದ್ಘಾಟನೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ, ಜು. 17ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಷ್ಟ್ರೀಯ ನಾಯಕರು ಯೋಜನೆಗೆ ಚಾಲನೆ ನೀಡುವ ಕುರಿತು ನಿರ್ಧರಿಸಲಾಗಿದೆ. ಅಂದು ರಾಷ್ಟ್ರೀಯ ನಾಯಕರು ಲಭ್ಯವಾಗದಿದ್ದರೆ ಜು. 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಡೆಡ್ ಲೈನ್ ಇಲ್ಲ
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ. ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು. ಸುಮಾರು 1.28 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನವಾಗಲಿದೆ. ಈ ಯೋಜನೆಗೆ ಆಧಾರ್ ಕಡ್ಡಾಯ ಎಂದು ಹೇಳಿದರು.

ಅರ್ಜಿ ಸಲ್ಲಿಕೆ ಎಲ್ಲಿ?
ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಗೃಹ ಜ್ಯೋತಿ ಯೋಜನೆಯಂತೆ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಬೇಡಿಕೆ ಹೆಚ್ಚಾದರೆ ಭವಿಷ್ಯದಲ್ಲಿ ಈ ಬಗ್ಗೆ ಯೋಚಿಸಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ಗೊಂದಲಗಳಿದ್ದರೆ ಹೀಗೆ ಮಾಡಿ
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಗೊಂದಲಗಳಿದ್ದರೆ 1902 ಸಹಾಯವಾಣಿಗೆ ಕರೆ ಮಾಡಬಹುದು. ಇಲ್ಲದಿದ್ದರೆ 8147500500 ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮಾಡಬಹುದು ಎಂದು ಸಚಿವೆ ತಿಳಿಸಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *