8ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಇನ್ಮುಂದೆ 3ನೇ ಶನಿವಾರ ಬ್ಯಾಗ್​ ಲೆಸ್ ಡೇ..!!

8ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಇನ್ಮುಂದೆ 3ನೇ ಶನಿವಾರ ಬ್ಯಾಗ್​ ಲೆಸ್ ಡೇ..!!

ನ್ಯೂಸ್ ಆ್ಯರೋ‌ : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಶಾಲಾ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಬ್ಯಾಗ್​ ರಹಿತ ದಿನದ ಆಚರಣೆ ಕುರಿತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸುತ್ತೋಲೆ ಹೊರಡಿಸಿದ್ದು,ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದ್ದು, ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.

2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಭಾಗಿಯಾಗುವಂತೆ ಮಾಡುವುದು ಹಾಗೂ ಪಠ್ಯದ ಹೊರೆ ಇಳಿಸುವ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ತಿಂಗಳಲ್ಲಿ ಒಂದು ದಿನವಾದರೂ ಮಕ್ಕಳು ಮಣಭಾರದ ಬ್ಯಾಗ್​ ಹೊರುವುದು ತಪ್ಪುತ್ತದೆ.

ಈ ಕುರಿತು ಜಿಲ್ಲಾ ಹಾಗೂ ಕ್ಲಸ್ಟರ್‌ ಮಟ್ಟದಲ್ಲಿ ನಡೆಸಲಾಗುವ ಸಭೆಗಳಲ್ಲಿ ಮತ್ತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರರಿಗೆ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್‌ಇಆರ್‌ಟಿ (ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ) ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ. ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್‌ಇಆರ್‌ಟಿ ವೆಬ್‌ಸೈಟ್ ನಲ್ಲಿ https://dsert.karnataka.gov.in/ ಅಪ್‌ಲೋಡ್ ಮಾಡಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *