Mangalore : ಬಿಜೈ ರಾಜನ ಕೊಲೆ ಪ್ರಕರಣ – ಭೂಗತ ಪಾತಕಿಯಾಗಿದ್ದ ರವಿ ಪೂಜಾರಿಯನ್ನು ‌ದೋಷಮುಕ್ತಗೊಳಿಸಿದ ಕೋರ್ಟ್

Mangalore : ಬಿಜೈ ರಾಜನ ಕೊಲೆ ಪ್ರಕರಣ – ಭೂಗತ ಪಾತಕಿಯಾಗಿದ್ದ ರವಿ ಪೂಜಾರಿಯನ್ನು ‌ದೋಷಮುಕ್ತಗೊಳಿಸಿದ ಕೋರ್ಟ್

ನ್ಯೂಸ್ ಆ್ಯರೋ : ಭೂಗತ ಪಾತಕಿ ರವಿ ಪೂಜಾರಿಯ ವಿರುದ್ಧ ದಾಖಲಾಗಿದ್ದ ಬಿಜೈ ರಾಜನ ಕೊಲೆ ಪ್ರಕರಣದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

2012 ನೇ ಇಸವಿಯಲ್ಲಿ ನಗರದ ಫಳ್ನೀರ್ ವೆಸ್ಟೇಟ್ ಟವರ್ಸ್ ಕಟ್ಟಡದಲ್ಲಿರುವ ನ್ಯಾಷನಲ್ ಮೆಡಿಕಲ್ ಬಳಿಯಲ್ಲಿರುವ ಕಾಯಿನ್ ಬೂತ್ ನ ಬಳಿ ರವಿಪೂಜಾರಿಯು ಒಳಸಂಚು ನಡೆಸಿ ಶೈಲೇಶ್ ರಾಜ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿ ಕೊಲೆ ಮಾಡಿಸಿದ ರವಿ ಪೂಜಾರಿ ಮತ್ತು ಅತನ ಸಹಚರರ ವಿರುದ್ಧ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಸದ್ರಿ ಘಟನೆಗಳ ಸಮಯ ರವಿಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು 2021 ನೇ ಇಸವಿಯಲ್ಲಿ ರವಿ ಪೂಜಾರಿಯನ್ನು ಸೆನೆಗಲ್‌ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ರವಿಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಮಾನ್ಯ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆ.ಎಂ.ಎಫ್‌.ಸಿ. ನ್ಯಾಯಾಲಯ ಮಂಗಳೂರು ಸೇರಿ ಒಟ್ಟು 4 ಪ್ರಕರಣಗಳಲ್ಲಿ ರವಿಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಲಾಗಿದೆ.

ಬಿಜೈ ರಾಜಾ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಗೌರವಾನ್ವಿತ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಯವರು ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿರುತ್ತಾರೆ. ಇನ್ನು ರವಿ ಪೂಜಾರಿಯ ವಿರುದ್ಧ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲರಾದ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *