ಇನ್ಮುಂದೆ ಸುಳ್ಳು ಸುದ್ದಿ ಬಿತ್ತರಿಸಿದರೆ ಕೇಸ್ ಫಿಕ್ಸ್ – ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಸಿಎಂ ಗ್ರೀನ್‌ ಸಿಗ್ನಲ್

ಇನ್ಮುಂದೆ ಸುಳ್ಳು ಸುದ್ದಿ ಬಿತ್ತರಿಸಿದರೆ ಕೇಸ್ ಫಿಕ್ಸ್ – ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಸಿಎಂ ಗ್ರೀನ್‌ ಸಿಗ್ನಲ್

ನ್ಯೂಸ್‌ ಆ್ಯರೋ : ಇನ್ಮುಂದೆ ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ:
ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಅವರು ವಿವರಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದರು.

ಸಚಿವರಾದ ಕೃಷ್ಣಬೈರೇಗೌಡ ಅವರು ಮಾತನಾಡಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕ ರ್ ಇದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *