ಮತ್ತೆ ಕರ್ನಾಟಕಕ್ಕೆ ಅನ್ಯಾಯ, ತಮಿಳುನಾಡಿಗೆ 15 ದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ – ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ

ಮತ್ತೆ ಕರ್ನಾಟಕಕ್ಕೆ ಅನ್ಯಾಯ, ತಮಿಳುನಾಡಿಗೆ 15 ದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ – ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ

ನ್ಯೂಸ್ ಆ್ಯರೋ : ತಮಿಳುನಾಡಿಗೆ‌ ಮುಂದಿನ 15 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀರ್ಮಾಣ ಕೈಗೊಳ್ಳಲಾಯಿತು. ಈ ಮೂಲಕ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಆದೇಶವನ್ನು ಪಾಲಿಸುವಂತೆ ಸಿಡಬ್ಲ್ಯುಎಂಎ ಸೂಚನೆ ನೀಡಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಮಧ್ಯೆ ಜಟಾಪಟಿ ನಡೆಯುತ್ತಲೇ ಇದೆ. ಕಾವೇರಿ ನೀರು ಹಂಚಿಕೆಯನ್ನು ವಿರೋಧಿಸಿ ಕರ್ನಾಟಕದಲ್ಲಿ ಬಂದ್‌, ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೆ ಈ ಆದೇಶ ಹೊರಬಿದ್ದಿದೆ.

ಕರ್ನಾಟಕದ ವಾದವೇನು?

ಕರ್ನಾಟಕದ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಶೇ 53 ರಷ್ಟು ಮಳೆ ಕೊರತೆ ಇದೆ. ರಾಜ್ಯ ಸರ್ಕಾರವು 161 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. 34 ತಾಲೂಕುಗಳು ಮಧ್ಯಮ ಬರ ಪೀಡಿತವೆಂದು ಸರ್ಕಾರ ಘೋಷಿಸಿದೆ. 32 ತೀವ್ರ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಕರ್ನಾಟಕ ತನ್ನ ಜಲಾಶಯಗಳಿಂದ ನೀರು ಹರಿಸುವ ಸ್ಥಿತಿಯಲ್ಲಿಲ್ಲ.

ಕರ್ನಾಟಕ ಸರ್ಕಾರ ಈಗಾಗಲೇ ನಿಮ್ಮ ಎಲ್ಲಾ ಆದೇಶ ಪಾಲಿಸಿದೆ. ರಾಜ್ಯದಲ್ಲಿ ನೀರು ಕೊರತೆ ಇರುವುದನ್ನು ಸಿಡಬ್ಲ್ಯುಎಂಎ ಗಮನಿಸಬೇಕು. ರಾಜ್ಯದ ರೈತರು, ಜನರ ಆಕ್ರೋಶ ಹೆಚ್ಚಾಗಿದ್ದು ಸರಣಿ ಬಂದ್ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ನೀರು ಹರಿಸುವುದು ಅಸಾಧ್ಯವೆಂದು ಕರ್ನಾಟಕ ಪರ ಅಧಿಕಾರಿಗಳು ವಾದ ಮಂಡಿಸಿದರು.

ತಮಿಳುನಾಡು ಮಂಡಿಸಿದ ವಾದವೇನು?

ಜೂನ್​ನಿಂದ ಸೆಪ್ಟೆಂಬರ್​ವರೆಗೆ ಕರ್ನಾಟಕ 123 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಈವರೆಗೆ ಕೇವಲ 40 ಟಿಎಂಸಿ ನೀರು ಮಾತ್ರ ಹರಿಸಿದೆ. ಬಾಕಿ 83 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸೂಚಿಸಬೇಕು ಎಂದು ಸಿಡಬ್ಲ್ಯುಎಂಎ ಸಭೆಯಲ್ಲಿ ತಮಿಳುನಾಡು ಸರ್ಕಾರದ ಪರ ಅಧಿಕಾರಿಗಳು ವಾದ ಮಂಡನೆ ಮಾಡಿದರು.

ಅಕ್ಟೋಬರ್​ನಲ್ಲಿ ತಮಿಳುನಾಡಿಗೆ 22 ಟಿಎಂಸಿ ನೀರು ಹರಿಸಬೇಕು. ಇದರ ಜೊತೆಗೆ ಸೆಪ್ಟೆಂಬರ್​ನಲ್ಲಿ ಬಾಕಿ 7 ಟಿಎಂಸಿ ನೀರು ಹರಿಸಬೇಕು. ನೀರಿಗಾಗಿ ತಮಿಳುನಾಡಿನಲ್ಲೂ ರೈತರು ಹೋರಾಟ ಆರಂಭಿಸಿದ್ದಾರೆ. ಇದನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಗಮನಿಸಬೇಕು. ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸಿನ ಅನ್ವಯ 3000 ಕ್ಯೂಸೆಕ್ ನೀರು ಸಾಕಾಗುವುದಿಲ್ಲ. ಪ್ರತಿ ದಿನ 12,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಬೇಕು ಎಂದು ತಮಿಳುನಾಡು ಸರ್ಕಾರ ವಾದ ಮಂಡನೆ ಮಾಡಿದೆ.

ನೀರು ಹಂಚಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ರಾಕೇಶ್ ಸಿಂಗ್

ಬಾಕಿ ಉಳಿಸಿಕೊಂಡಿರುವ 12 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಪಟ್ಟು ಹಿಡಿಯಿತು. ಇದಕ್ಕೆ ಎಸಿಎಸ್ ರಾಕೇಶ್ ಸಿಂಗ್ ಏರುಧ್ವನಿಯಲ್ಲೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕಾವೇರಿ ಕೊಳ್ಳದ ಡ್ಯಾಮ್​ಗಳಲ್ಲಿ ನೀರೇ ಇಲ್ಲದಿರುವುದರಿಂದ ನೀರು ಬಿಡುವುದು ಹೇಗೆ ಸಾಧ್ಯ. ತಮಿಳುನಾಡಿಗೆ ಮತ್ತೆ 15 ದಿನ 3000 ಕ್ಯೂಸೆಕ್ ನೀರು ಹರಿಸಲು ಸಾಧ್ಯವಿಲ್ಲ ಎಂದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *