ಚೈತ್ರಾ ಗ್ಯಾಂಗ್ ಐದು ಕೋಟಿ ವಂಚನೆ ಪ್ರಕರಣ – 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, ಏನೇನ್ ಉಲ್ಲೇಖವಿದೆ?

ಚೈತ್ರಾ ಗ್ಯಾಂಗ್ ಐದು ಕೋಟಿ ವಂಚನೆ ಪ್ರಕರಣ – 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, ಏನೇನ್ ಉಲ್ಲೇಖವಿದೆ?

ನ್ಯೂಸ್ ಆ್ಯರೋ : ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್​​ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ.

ಕೇಂದ್ರ ನಗರ ಅಪರಾಧ ವಿಭಾಗ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ 75 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 4.11 ಕೋಟಿ ನಗದು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಪ್ರಾಥಮಿಕ, ಸಾಂದರ್ಭಿಕ ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು.

ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಮೈಸೂರು ಮೂಲದ ವ್ಯಕ್ತಿಯು ನೀಡಿದ ಹೇಳಿಕೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಸಿಸಿಬಿ ತಂಡ ಚೈತ್ರಾ ವಂಚನೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದು ಎಂಎಲ್‌ಎ ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿ, 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ‌ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ರಿಕವರಿ ಮಾಡಲಾಗಿದೆ. ಬೃಹತ್ ಮೊತ್ತದ ಹಣ ರಿಕವರಿ ಹಿನ್ನಲೆ ಚೈತ್ರಾ ಗ್ಯಾಂಗ್​ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಈವರೆಗೆ ಸಿಸಿಬಿ ಪೊಲೀಸರು ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಪಡೆದಿದ್ದಾರೆ. ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ ಶೀಟ್ ನಲ್ಲಿ‌ ಉಲ್ಲೇಖಿಸಲಾಗಿದೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಿ ವರದಿ ಸಲ್ಲಿಸಲಾಗಿದೆ. ಸದ್ಯ ಚೈತ್ರಾ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜಾಮೀನು ಸಿಗದೇ ಕಂಗಾಲಾಗಿದ್ದಾರೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *