ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್‌ಟಾಪ್‌ – ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ..!

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್‌ಟಾಪ್‌ – ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ..!

ನ್ಯೂಸ್ ಆ್ಯರೋ : ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿವಿಧ ವಿಶ್ವ ವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸುವುದಾಗಿ ಮಹತ್ವ ಘೋಷಣೆ ಮಾಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ ಮಾಡಿ ಅಗತ್ಯ ಕ್ರಮಕ್ಕೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಎಲ್ಲಾ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್‌ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.

ಹೌದು ವಿ.ವಿ.ಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿಯು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್ ಅನ್ನು ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಜೊತೆಗೆ ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದು ಟ್ವೀಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *