Mangalore : ಹರೀಶ್ ಪೂಂಜಾ ಇನ್ನೂ ಬಚ್ಚಾ, ಹಿಂದಿನ ಮುಖ್ಯಮಂತ್ರಿಗೆ ಕಲೆಕ್ಷನ್ ಮಾಸ್ಟರ್ ಅನ್ನಲಿ – ಪೂಂಜಾ ಫೇಸ್‌ಬುಕ್‌ ಪೋಸ್ಟ್ ಗೆ ಸಿಎಂ ಸಿದ್ದರಾಮಯ್ಯ ಕಿಂಡಲ್

Mangalore : ಹರೀಶ್ ಪೂಂಜಾ ಇನ್ನೂ ಬಚ್ಚಾ, ಹಿಂದಿನ ಮುಖ್ಯಮಂತ್ರಿಗೆ ಕಲೆಕ್ಷನ್ ಮಾಸ್ಟರ್ ಅನ್ನಲಿ – ಪೂಂಜಾ ಫೇಸ್‌ಬುಕ್‌ ಪೋಸ್ಟ್ ಗೆ ಸಿಎಂ ಸಿದ್ದರಾಮಯ್ಯ ಕಿಂಡಲ್

ನ್ಯೂಸ್ ಆ್ಯರೋ : ಸಿಎಂ ಸಿದ್ದರಾಮಯ್ಯರ ಬಗ್ಗೆ ಹರೀಶ್ ಪೂಂಜಾ ಫೇಸ್‌ಬುಕ್‌ ಪೇಜ್ ನಲ್ಲಿ ಕಲೆಕ್ಷನ್ ಮಾಸ್ಟರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಆಗಮಿಸಿದ್ದ ಸಿ.ಎಂ ಸಿದ್ದರಾಮಯ್ಯ ಹರೀಶ್ ಪೂಂಜಾ ಅವರನ್ನು ಬಚ್ಚಾ ಎಂದು ಕರೆದಿದ್ದಾರೆ‌.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ, ನಾನು 83ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು. ಆವತ್ತು ಯಾರು ನನ್ನ ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದಿದ್ದಾರೆ.

50 ಕೋಟಿ ಆಫರ್ ಬಗ್ಗೆ ಸುದ್ದಿಗಾರರು ಕೇಳಿದಾಗ, ನನಗೆ ಆ ಬಗ್ಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ ಯಾರು ಹೇಳಿದ್ರೋ ಅವರತ್ರ ಕೇಳಿ, ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸ್ತಾ ಇದಾರೆ ಅನ್ನೋ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರ ಅಫರ್ ಮಾಡ್ತಾ ಇದಾರೆ ಅನ್ನೋ ಮಾಹಿತಿ ಇಲ್ಲ ಎಂದರು.

ಪರಮೇಶ್ವರ್ ಊಟಕ್ಕೆ ಕರೆದಿದ್ರು, ಹೋಗಿದೀವಿ, ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು ಅಲ್ಲಿ ಯಾವುದೇ ರಾಜಕೀಯ ಇಲ್ಲ, ಅದೆಲ್ಲಾ ಸುಳ್ಳು, ಬಣ್ಣ ಕಟ್ಟಲಾಗ್ತಿದೆ ಎಂದರು.

ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡ್ತೇವೆ, ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡ್ತೇವೆ. ನಾವು ಬರ ಪರಿಹಾರ 7900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು.

ಇನ್ನು ಕಾರ್ಕಳ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ತನಿಖೆ ಆಗಲಿದೆ ಎಂದು ಮಂಗಳೂರು ಏರ್ ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *