ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ – ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ – ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ರಿಲೀಫ್

ನ್ಯೂಸ್ ಆ್ಯರೋ‌ : ಕಳೆದ ವರ್ಷ ಉಡುಪಿಯ ‌ಲಾಡ್ಜ್ ಒಂದರಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಯ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯವು ಅವರಿಗೆ ಕ್ಲೀನ್ ಚಿಟ್ ನೀಡಿದೆ.

ಗುತ್ತಿಗೆ ಬಿಲ್‌ ಪಾವತಿ ಕಮಿಷನ್ ಕೇಳಿದ್ದಾಗಿ ಆರೋಪ ಹೊರಿಸಲಾಗಿತ್ತು. ಆದರೆ ಆರೋಪ ಸಾಬೀತಾಗಿಲ್ಲವೆಂದು ಪೊಲೀಸರು ವರದಿ ಸಲ್ಲಿಸಿದ್ದರು. ಈ ವರದಿಯನ್ನು ಪ್ರಶ್ನಿಸಿ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ಬಿ-ರಿಪೋರ್ಟನ್ನು ಅಂಗೀಕರಿಸಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಎಸ್‌. ಈಶ್ವರಪ್ಪ ಅವರು ಗ್ರಾಮೀಣ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವರಾಗಿದ್ದಾಗ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೃತ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಕಮೀಷನ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್​​ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆ ಬಳಿಕ ಕೆಎಸ್​ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಗೂ ಮೊದಲೇ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *