ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ 14 ತಿಂಗಳ ಕಾಲ ಜೈಲಿನಲ್ಲಿದ್ದ ರವಿ ಆರೋಗ್ಯ ಸಮಸ್ಯೆ ನಿಮಿತ್ತ ಜಾಮೀನು ನೀಡಬೇಕು ಎಂದು ಮಾಡಿದ್ದ ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಜಾಮೀನು ಮಂಜೂರು ಮಾಡಿದ್ದಾರೆ.

ಹಲವು ಪ್ರಕರಣಗಳಲ್ಲಿ ರಾಜ್ಯ ಸರ್ಕಾರಕ್ಕೆ ತಲೆನೋವಾಗಿದ್ದ ಸ್ಯಾಂಟ್ರೋ ರವಿಯನ್ನು ಕಳೆದ ವರ್ಷ ಗುಜರಾತ್‌ನಿಂದ ಬಂಧಿಸಿ ಕರೆತರಲಾಗಿತ್ತು. ಈ ಮೊದಲು ಆರೋಪಿ ಜಾಮೀನಿಗೆ ಹೈಕೋರ್ಟ್, ಬಳಿಕ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ತಿರಸ್ಕೃತವಾಗಿತ್ತು. ಇದೀಗ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸ್ಯಾಂಟ್ರೋ ರವಿ ವಿರುದ್ಧ ಕಳೆದ ವರ್ಷ ಮೈಸೂರಿನಲ್ಲಿ ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಾಗಿತ್ತು. ಬಂಧನ ವೇಳೆ ಆರೋಪಿಯಿಂದ ಮೊಬೈಲ್ ಹಾಗೂ ಇತರೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ಅಂದಿನ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದರು.

ನಂತರ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಸಿಐಡಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಮೈಸೂರಿನ ಪೊಲೀಸರು ದಾಖಲೆಗಳನ್ನು ಸಿಐಡಿ ತಂಡಕ್ಕೆ ವಹಿಸಿದ್ದರು. ಆರೋಪಿ ವಿರುದ್ಧ ಪ್ರಕರಣ ದಾಖಲಾಗುವುದರಿಂದ ಹಿಡಿದು ಆತನ ಬಂಧನದವರೆಗೆ ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಪಾತ್ರವು ಮುಖ್ಯವಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *