ಮತ್ತೆ ತಮಿಳುನಾಡಿಗೆ ನೀರು ಹರಿಸಲು CWRC ಸೂಚನೆ – ಕಾವೇರಿ ವಿಚಾರದಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯ

ನ್ಯೂಸ್ ಆ್ಯರೋ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ.

ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ನವೆಂಬರ್ 23 ರಿಂದ ಡಿ.23 ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು. ಆದರೂ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ.

ಇತ್ತೀಚೆಗೆ ನವೆಂಬರ್ 1ರಿಂದ 23ವರೆಗೆ ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿತ್ತು, ಇದೀಗ ಮತ್ತೆ ನವೆಂಬರ್ 23 ರಿಂದ ಡಿ.23 ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ನಿರ್ದೇಶನ ನೀಡಿದೆ.

ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ಇವತ್ತಿಗೂ ಕೂಡ ಮಂಡ್ಯ ಜಿಲ್ಲೆಯಲ್ಲಿ ರೈತಪರ ಸಂಘಟನೆಗಳು ಪ್ರತಿಭಟನೆ ಹಾಗೂ ಹೋರಾಟಗಳನ್ನು ಮಾಡುತ್ತಲೇ ಇವೆ. ಆದರೂ ಕೂಡ ಪದೇಪದೇ ಸಿ ಡಬ್ಲ್ಯೂ ಆರ್ ಸಿ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ ನೀಡುತ್ತಲೇ ಬಂದಿದ್ದು, ಇದೀಗ ಮತ್ತೆ ಕರ್ನಾಟಕಕ್ಕೆ ಅನ್ಯಾಯ ಆದಂತಾಗಿದೆ.