ಸತತ ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ನಿಧನ – ಒಂಟಿಸಲಗದ ಜೊತೆ ಕಾದಾಡಿ ಪ್ರಾಣಬಿಟ್ಟ “ಗಜಪಡೆಯ ಹಿರಿಯಣ್ಣ”

ಸತತ ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ನಿಧನ – ಒಂಟಿಸಲಗದ ಜೊತೆ ಕಾದಾಡಿ ಪ್ರಾಣಬಿಟ್ಟ “ಗಜಪಡೆಯ ಹಿರಿಯಣ್ಣ”

ನ್ಯೂಸ್ ಆ್ಯರೋ‌ : ಹಾಸನ ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಮೂರು ಕಾಡಾನೆ ಸೆರೆ ಹಿಡಿದು, ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯಿಂದ ನಡೆಸಲಾಗುತ್ತಿತ್ತು.ಈ ವೇಳೆಯಲ್ಲಿ, ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ.

ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಮಾವುತರು, ಅರಣ್ಯ ಇಲಾಖೆ ಸಿಬ್ಬಂದಿಗಳು ಪರಾರಿಯಾಗಿದ್ದಾರೆ. ಈ ಬಳಿಕ ಅರ್ಜುನ ಹಾಗೂ ಒಂಟಿ ಸಲಗದ ನಡುವೆ ಸತತ ಕಾದಾಟ ನಡೆದಿದೆ. ಕಾದಾಟದಲ್ಲಿ ಅಂತಿಮವಾಗಿ ಅರ್ಜುನ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಸದ್ಯ ಒಂಟಿ ಸಲಗದ ದಾಳಿಯಲ್ಲಿ ಸಾವನ್ನಪ್ಪಿರುವ ಅರ್ಜುನ ಆನೆಯು 1960 ರಲ್ಲಿ ಜನಿಸಿತ್ತು. 1968ರಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆಯಲ್ಲಿ ಅರ್ಜುನನನ್ನು ಸೆರೆಹಿಡಿದು ಆ ಬಳಿಕ ಅದನ್ನು ಪಳಗಿಸಲಾಗಿತ್ತು.

1990ರ ದಶಕದಲ್ಲಿ ಮೈಸೂರಿನಲ್ಲಿ ದಸರಾ ಉತ್ಸವದ ಸಮಯದಲ್ಲಿ ಮೆರವಣಿಗೆಗಳನ್ನು ಒಳಗೊಂಡ ಶಿಬಿರಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಯಿತು. ದ್ರೋಣ, ಬಲರಾಮ ಆನೆಗಳು ಅನಾರೋಗ್ಯಕ್ಕೆ ಒಳಗಾದ ನಂತರ ಅರ್ಜುನನನ್ನು ಅಂಬಾರಿ ಹೊರಲು ಅವಕಾಶ ನೀಡಲಾಗಿತ್ತು.

ಅರ್ಜುನ್ ಈಗಾಗಲೇ ತನ್ನ ಕೆಟ್ಟ ಕೋಪಕ್ಕೆ ಹೆಸರುವಾಸಿಯಾಗಿದ್ದ. ಅರ್ಜುನನು 2012 ರಿಂದ 2019 ರವರೆಗೆ ಸತತ 8 ಬಾರಿ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತಿದ್ದನು. ಈಗ 60 ವರ್ಷ ಮೇಲ್ಪಟ್ಟ ಆನೆಗಳನ್ನು ನಿವೃತ್ತಿಗೊಳಿಸುವ ಸರ್ಕಾರದ ಆದೇಶದ ಮೇಲೆ ಅರ್ಜುನ ಹೆಸರನ್ನು ಕೈಬಿಡಲಾಗಿತ್ತು. ಅದನ್ನು ಬಳ್ಳೆ ಆನೆ ಶಿಬರದಲ್ಲಿ ಇರಿಸಲಾಗಿತ್ತು. ಆದರೆ ಅರ್ಜುನ ಇದೀಗ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆಯಲ್ಲಿ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರುವುದು ದುರಂತ..!

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *