ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ ಸಲುವಾಗಿ ರಾಜ್ಯ ಸರ್ಕಾರವು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ.

ರಾಜ್ಯ ಕಾರ್ಮಿಕ ಆಯುಕ್ತರು ಈ ಆದೇಶ ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024ರಂದು ಘೋಷಿಸಿದ್ದು ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ.

ಹಾಗಾಗಿ ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೆಯ ಹಂತ ಹಾಗೂ ದಿನಾಂಕ: 07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ದಿನಾಂಕ :26.04.2024 (ಶುಕ್ರವಾರ) ರಂದು ನಿಗದಿಯಾಗಿರುತ್ತದೆ.

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ 3-ಎ ಪುಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ.

ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ದಿನಾಂಕ 26-04-2024 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದ್ದಾರೆ.

ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪುಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ದಿನಾಂಕ 18.04.2024ರಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ ಅರಿವು ಮೂಡಿಸಲಾಗಿದೆ ಎಂದು ಹೇಳಿದ್ದಾರೆ

ಆದುದರಿಂದ ತಮ್ಮ ಸಂಘದ ಎಲ್ಲಾ ಸದಸ್ಯರಿಗೆ ಈ ಮಾಹಿತಿಯನ್ನು ಕಳುಹಿಸಿ ಮತದಾನದ ದಿನದಂದು ಎಲ್ಲಾ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುವು ಮಾಡಿಕೊಡಬೇಕೆಂದು ಈ ಮೂಲಕ ತಿಳಿಸಲಾಗಿದೆ.

Related post

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…
ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…

Leave a Reply

Your email address will not be published. Required fields are marked *