ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ – ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೊಕ್ಸೊ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ – ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೊಕ್ಸೊ ಪ್ರಕರಣ ದಾಖಲು

ನ್ಯೂಸ್ ಆ್ಯರೋ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೊಕ್ಸೊ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *