RR ನಗರ ಶಾಸಕ ಮುನಿರತ್ನ ವಿರುದ್ಧ FIR – ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಯಲಹಂಕ ತಹಶೀಲ್ದಾರ್ ದೂರು

RR ನಗರ ಶಾಸಕ ಮುನಿರತ್ನ ವಿರುದ್ಧ FIR – ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಯಲಹಂಕ ತಹಶೀಲ್ದಾರ್ ದೂರು

ನ್ಯೂಸ್ ಆ್ಯರೋ‌ : ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ ಆರ್.ಆರ್.ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು ಜತೆಗೆ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟ ಮಾಡಿದ್ದಾರೆ ಎಂದು ಯಲಹಂಕ ತಹಶೀಲ್ದಾರ್ ಅನಿಲ್ ಅವರು ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲು ಮಾಡಿದ್ದರು. ದೂರಿನ ಮೇರೆಗೆ ಇದೀಗ ಎಫ್‌ಐಆರ್ ದಾಖಲಾಗಿದೆ.

ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅನಿಲ್ ದೂರು ದಾಖಲು
ಮಾಡಿದ್ದರು.

ಹುಣಸಮಾರನಹಳ್ಳಿ ಸರ್ವೆ ನಂ. 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮಾ ಶಾಸಕ ಮುನಿರತ್ನ ವಿರುದ್ಧ ಸ್ಪೋಟಕ ಕಾಯ್ದೆ 1884 US 9B(1b), ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಅನ್ವಯ ದೂರು ದಾಖಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *