ಶಕ್ತಿ ಯೋಜನೆಗೆ ಭರ್ಜರಿ ಸ್ಪಂದನೆ‌ – ಮೊದಲ ದಿನವೇ ಸರ್ಕಾರದ ಬೊಕ್ಕಸಕ್ಕೆ ಕೋಟಿಗೂ‌ ಅಧಿಕ ಲಾಸ್..!!

ಶಕ್ತಿ ಯೋಜನೆಗೆ ಭರ್ಜರಿ ಸ್ಪಂದನೆ‌ – ಮೊದಲ ದಿನವೇ ಸರ್ಕಾರದ ಬೊಕ್ಕಸಕ್ಕೆ ಕೋಟಿಗೂ‌ ಅಧಿಕ ಲಾಸ್..!!

ನ್ಯೂಸ್ ಆ್ಯರೋ‌ : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಭರವಸೆ ನೀಡಿದಂತೆ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಸುವ ಶಕ್ತಿ ಯೋಜನೆಗೆ ರವಿವಾರ ಚಾಲನೆ ನಿಡಲಾಗಿದೆ. ಇದಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾವಿರಾರು ಮಹಿಳೆಯರು ಹರ್ಷ ವ್ಯಕ್ತಪಡಿಸಿದ್ದಾರೆ.

ದಾಖಲೆಯ ಸಂಖ್ಯೆಯಲ್ಲಿ ಪಯಣ
ಯೋಜನೆ ಆರಂಭವಾದ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ಗಂಟೆ ವರೆಗಿನ ಸುಮಾರು 11 ಗಂಟೆಗಳಲ್ಲಿ ಸುಮಾರು 5.71 ಲಕ್ಷದಷ್ಟು ಮಹಿಳೆಯರು ಪ್ರಯಾಣಿಸಿದ್ದಾರೆ.

ವಿವಿಧ ನಿಗಮಗಳ ಅಂಕಿ ಅಂಶ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮ(ಕೆ.ಎಸ್.ಆರ್.ಟಿ.ಸಿ.)ದ ಬಸ್ ಗಳಲ್ಲಿ 1,93,831 ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದು, ಇವರ ಪ್ರಯಾಣದ ಮೌಲ್ಯ 58,16,178 ರೂ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿ.ಎಂ.ಟಿ.ಸಿ.)ಬಸ್ ಗಳಲ್ಲಿ ಸುಮಾರು 2,01,215 ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಈ ಪಯಣದ ಮೌಲ್ಯ 26,19,604 ರೂ.

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ(ಎನ್.ಡಬ್ಲ್ಯು.ಕೆ.ಆರ್.ಟಿ.ಸಿ.)ಬಸ್ ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ 1,22,354. ಇವರ ಸಂಚಾರದ ಮೌಲ್ಯ 36,17,096 ರೂ.

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಕೆ.ಆರ್.ಟಿ.ಸಿ.)ಬಸ್ ಗಳಲ್ಲಿ 53,623 ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಇವರ ಪ್ರಯಾಣದ ಮೌಲ್ಯ 19,70,000 ರೂ. ಹೀಗೆ ನಾಲ್ಕು ನಿಗಮಗಳಿಂದ ಖರ್ಚಾದ ಒಟ್ಟು ಮೌಲ್ಯ -1.40 ಕೋಟಿ ರೂ.

ಶಕ್ತಿ ಯೋಜನೆ ಆರಂಭವಾದ 2ನೇ ದಿನವಾದ ಸೋಮವಾರ, ಇಂದೂ ಕೂಡ ರಾಜ್ಯದ ಹಲವೆಡೆ ಸರಕಾರಿ ಬಸ್ ಗಳಲ್ಲಿ ಮಹಿಳೆಯರ ನೂಕು ನುಗ್ಗಲು ಕಂಡು ಬಂತು. ವಾರಾಂತ್ಯ ಮತ್ತು ಮೊದಲ ದಿನವಾದ್ದರಿಂದ ಎರಡು ದಿನ ಪ್ರಯಾಣಿಕರ ಸಂಖ್ಯೆ ತುಸು ಕಡಿಮೆ ಇತ್ತು. ಮುಂದಿನ ದಿನಗಳಲ್ಲಿ ಇದು ಹೆಚ್ಚಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *