ಗೃಹ ಜ್ಯೋತಿ ಎಫೆಕ್ಟ್, 2023 ರಲ್ಲಿ ಶೇ.45ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಳ – ಇಂಧನ ಸಚಿವ ಕೆ.ಜೆ. ಜಾರ್ಜ್ ಏನ್ ಹೇಳಿದ್ರು?

ಗೃಹ ಜ್ಯೋತಿ ಎಫೆಕ್ಟ್, 2023 ರಲ್ಲಿ ಶೇ.45ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಳ – ಇಂಧನ ಸಚಿವ ಕೆ.ಜೆ. ಜಾರ್ಜ್ ಏನ್ ಹೇಳಿದ್ರು?

ನ್ಯೂಸ್ ಆ್ಯರೋ : 2022 ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್ ಬೇಡಿಕೆ ಸರಾಸರಿ ಶೇ.43 ರಷ್ಟು ಹೆಚ್ಚಿದ್ದು, ಅಕ್ಟೋಬರ್ ತಿಂಗಳಲ್ಲಿ 15,978 ಮೆಗಾವ್ಯಾಟ್ ಬೇಡಿಕೆ ದಾಖಲಾಗಿದೆ. ಇನ್ನೂ ವಿದ್ಯುತ್ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ.45 ರಷ್ಟು ಹೆಚ್ಚಿದೆ ಎಂದು ಇಂಧನ ಇಲಾಖೆ ಸಚಿವರಾದ ಕೆ.ಜೆ. ಜಾರ್ಜ್ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್ ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಕೃಷಿ ಬಳಕೆಯಲ್ಲಿ ಶೇ.55 ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ.9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.

ಸೆಕ್ಷನ್ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್ ವಿತರಣೆ ಸಹಜ ಸ್ಥಿತಿಗೆ ಬಂದಿದ್ದು, ನೋಡಲ್ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ 5-7 ಗಂಟೆಗಳ ಅವಧಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ರಾಜ್ಯದಾದ್ಯಂತ ಐಪಿ ಸೆಟ್ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್ ಒದಗಿಸಲು 600 ಮೆಗಾವ್ಯಾಟ್/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್ ಯುನಿಟ್ ಗಳ ಅಗತ್ಯವಿರುವುದರಿಂದ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್ ನೀಡಲಾಗುವುದು ಎಂದು ತೀರ್ಮಾನ ತಿಳಿಸಿದರು.

ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು. ಮುಂದಿನ ವರ್ಷದಲ್ಲಿ ಐಪಿ ಸೆಟ್ಗಳಿಗೆ ವಿದ್ಯುತ್ ಪೂರೈಕೆಯನ್ನು ಸೌರವಿದ್ಯುತ್ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ (Solarisation of EIP Feeders). ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್ ನೀಡಲು ಇದರಿಂದ ಅನುಕೂಲವಾಗಲಿದೆ ಎಂದರು.

Related post

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…
17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ ನಿರೂಪಕಿ ಅನುಪಮಾ ಗೌಡ!

17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ…

ನ್ಯೂಸ್ ಆರೋ: ಕನ್ನಡದ ಖ್ಯಾತ ನಿರೂಪಕಿ ಅನುಪಮಾ ಗೌಡ ತಮ್ಮ ಕೆಂಪು ಬಣ್ಣದ ಥಾರ್ ಜೀಪ್ ಮಾರಾಟ ಮಾಡಿದ್ದಾರೆ. ಈಗ ಐಷಾರಾಮಿ ಬೆಂಜ್ ಖರೀದಿಸಲು ಕಾರಣ ರಿವೀಲ್ ಮಾಡಿದ್ದಾರೆ.…

Leave a Reply

Your email address will not be published. Required fields are marked *