
Weather Report : ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ – ಕರಾವಳಿ ಭಾಗದಲ್ಲೂ ವರುಣನ ಅಬ್ಬರ : ಹವಾಮಾನ ಇಲಾಖೆ ಮಾಹಿತಿ
- ಕರ್ನಾಟಕ
- March 15, 2023
- No Comment
- 1011
ನ್ಯೂಸ್ ಆ್ಯರೋ : ಬಿಸಿಲಬೇಗೆಯಿಂದ ಕಂಗೆಟ್ಟ ಜನರಿಗೆ ಮಳೆ ತಂಪೆರೆಯುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇಂದು ರಾಜ್ಯದ ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಮತ್ತು 17 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ.