ನಾವು ಬಿಲ್ ಕಟ್ಟಲ್ಲ ಬೇಕಿದ್ರೆ ಸಿದ್ದು, ಡಿಕೆಶಿ ಸಂಪರ್ಕಿಸಿ – ಹೊಸ ಸರ್ಕಾರಕ್ಕೆ ಸವಾಲಾದ 200 ಯುನಿಟ್ ಫ್ರೀ ಕರೆಂಟ್ ಆಫರ್..!!

ನಾವು ಬಿಲ್ ಕಟ್ಟಲ್ಲ ಬೇಕಿದ್ರೆ ಸಿದ್ದು, ಡಿಕೆಶಿ ಸಂಪರ್ಕಿಸಿ – ಹೊಸ ಸರ್ಕಾರಕ್ಕೆ ಸವಾಲಾದ 200 ಯುನಿಟ್ ಫ್ರೀ ಕರೆಂಟ್ ಆಫರ್..!!

ನ್ಯೂಸ್ ಆ್ಯರೋ‌ : ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ವಿದ್ಯುತ್ ನ ಭರವಸೆ ನೀಡಿದ್ದ ಕಾಂಗ್ರೆಸ್ ಸರಕಾರಕ್ಕೆ ಈಗ ಅದರ ಜಾರಿ ಬಗ್ಗೆ ಒತ್ತಡ ಹೆಚ್ಚುತ್ತಿದೆ. ಹಲವೆಡೆ ವಿದ್ಯುತ್ ಬಿಲ್ ಪಾವತಿಸಲು ಜನರು ನಿರಾಕರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಾದ ವೀಡಿಯೋ, ಫೋಟೋಗಳು ಹರಿದಾಡುತ್ತಿವೆ.

ಹಲವು ಕಡೆಗಳಲ್ಲಿ ವಿದ್ಯುತ್ ಮೀಟರ್ ಮೇಲೆ ಕಾಗದವನ್ನು ಅಂಟಿಸಲಾಗಿದ್ದು, ”ನಾವು 200 ಯೂನಿಟ್‍ಗಳಿಗಿಂತ ಹೆಚ್ಚು ವಿದ್ಯುತ್ ಖರ್ಚು ಮಾಡುತ್ತಿಲ್ಲ. ಹಾಗಾಗಿ ವಿದ್ಯುತ್ ಮಾಪನ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರನ್ನು ಸಂಪರ್ಕಿಸಿ” ಎಂದು ಬರೆಯಲಾಗಿದೆ.

ಚುನಾವಣಾ ಪ್ರಚಾರದ ವೇಳೆ ಡಿ.ಕೆ.ಶಿವಕುಮಾರ್, ಜೂನ್ ತಿಂಗಳಿನಿಂದ ಯಾರೂ ವಿದ್ಯುತ್ ಬಿಲ್ ಪಾವತಿಸುವಂತಿಲ್ಲ ಎಂದು ಘೋಷಿಸಿದ್ದರು. ಈಗ ಮೇ ತಿಂಗಳಿನಿಂದಲೇ ವಿದ್ಯುತ್ ಬಿಲ್ ಪಾವತಿಸದಿರುವ ಅಭಿಯಾನಗಳು ಚಾಲನೆಗೊಂಡಿವೆ. ಇತ್ತ ಬಿಜೆಪಿ 5 ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಮಾತಿನಂತೆ ಅನುಷ್ಠಾನಕ್ಕೆ ತರಬೇಕೆಂದು ಸರಕಾರದ ಮೇಲೆ ಒತ್ತಡ ಹೇರುತ್ತಿದೆ.

ಮೊದಲ ಸಚಿವ ಸಂಪುಟ ಸಭೆಯಲ್ಲೇ ಸರಕಾರ ಯೋಜನೆಗಳ ಅನುಷ್ಠಾನಕ್ಕೆ ಆದೇಶ ಹೊರಡಿಸಿದೆ. ಆದರೆ ಫಲಾನುಭವಿಗಳಾರು, ಯಾವ ಸ್ವರೂಪದಲ್ಲಿ ಅನುಷ್ಠಾನಕ್ಕೆ ತರಲಾಗುವುದು? ಯೋಜನಾ ವೆಚ್ಚವೆಷ್ಟು? ಅದರಿಂದ ಎದುರಾಗಬಹುದಾದ ಆರ್ಥಿಕ ನಷ್ಟವನ್ನು ಭರಿಸಲು ಅನುಸರಿಸುವ ಕ್ರಮಗಳೇನು? ಎಂಬೆಲ್ಲ ವಿವರಗಳು 2ನೇ ಸಂಪುಟ ಸಭೆಯಲ್ಲಿ ಚರ್ಚೆಗೊಳಗಾಗಲಿವೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಪ್ರಿಲ್ ಮತ್ತು ಮೇ ತಿಂಗಳ ವಿದ್ಯುತ್ ಶುಲ್ಕ ಪಾವತಿಸಬೇಕಿತ್ತು. ಆದರೆ ಈಗಲೇ ಪಾವತಿಸಲು ನಿರಾಕರಿಸುತ್ತಿರುವುದು ಹೊಸ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಮೊದಲು ಮೀಟರ್ ಮಾಪಕವಾದ 15 ದಿನಗಳ ಒಳಗೆ ಬಿಲ್ ಪಾವತಿಗೆ ಕಾಲಾವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಪಾವತಿ ಪ್ರಮಾಣ ಶೇ. 30ರಷ್ಟು ದಾಟಿಲ್ಲ ಎಂದು ಹೇಳಲಾಗುತ್ತಿದೆ. ಈ ಮೊದಲು ನಿಗದಿತ ಅವಧಿಯಲ್ಲಿ ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತಿತ್ತು. ಪ್ರಸ್ತುತ ಆ ರೀತಿ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯುತ್ ಸರಬರಾಜು ಕಂಪನಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ.

1,200 ಕೋಟಿ ರೂ. ಅಗತ್ಯ

ಒಂದು ಅಂದಾಜಿನ ಮೂಲಕ ಸರ್ಕಾರ ಘೋಷಿಸಿರುವ ಗೃಹಜ್ಯೋತಿ ಯೋಜನೆಗೆ ಮಾಸಿಕ 1,200 ಕೋಟಿ ರೂ.ಗಳ ಅಗತ್ಯವಿದೆ. ಚುನಾವಣೆಗೆ ಮೊದಲು ಕಾಂಗ್ರೆಸ್ ನಾಯಕರು ಷರತ್ತುಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ. ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಪ್ರಕಟಿಸಿದ್ದರು. ಈಗ ಅದರ ಅನುಷ್ಠಾನ ವಿಳಂಬವಾದಷ್ಟೂ ವಿದ್ಯುತ್ ಸರಬರಾಜು ಕಂಪನಿಗಳ ಮೇಲೆ ಆರ್ಥಿಕ ಹೊರೆ ಹೆಚ್ಚಾಗುತ್ತದೆ. ಹಣ ವಸೂಲಿ ಆಗದೆ ಇರುವುದು ಚಿಂತೆಗೀಡು ಮಾಡಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *