ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು – 31 ವರ್ಷಗಳ ಮರುಜೀವ ಪ್ರಕರಣಕ್ಕೆ ತಾತ್ಕಾಲಿಕ ಬ್ರೇಕ್

ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು – 31 ವರ್ಷಗಳ ಮರುಜೀವ ಪ್ರಕರಣಕ್ಕೆ ತಾತ್ಕಾಲಿಕ ಬ್ರೇಕ್

ನ್ಯೂಸ್ ಆ್ಯರೋ : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಮಾಡಿ ಹುಬ್ಬಳ್ಳಿಯ 1 ನೇ ಹೆಚ್ಚುವರಿ ಕೋರ್ಟ್ ಆದೇಶ ಹೊರಡಿಸಿದೆ.

ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ್ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದೆ.

ಬರೋಬ್ಬರಿ 31 ವರ್ಷಗಳ ಬಳಿಕ ಹುಬ್ಬಳ್ಳಿ ರಾಮಜನ್ಮಭೂಮಿ ಹೋರಾಟ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಶ್ರೀಕಾಂತ್ ಪೂಜಾರಿ ಬಂಧನವಾಗಿತ್ತು. ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆ ಇಂದು ಶ್ರೀಕಾಂತ್ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ರಾಮಜನ್ಮಭೂಮಿ ಹೋರಾಟ ಪ್ರಕರಣದ ಮೂರನೇ ಆರೋಪಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಹುಬಳ್ಳಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 1995 ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಕರಸೇವೆ ವೇಳೆ ಗಲಭೆ ಸಂಭವಿಸಿ ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ಸಂಬಂಧ 9 ಜನರ ವಿರುದ್ಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಮತ್ತೆ ಮರುಜೀವ ಪಡೆದಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *