
ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ – ರಾಜ್ಯ, ರಾಷ್ಟ್ರ ರಾಜಕಾರಣದ ಸ್ಫೋಟಕ ಭವಿಷ್ಯ ತೆರೆದಿಟ್ಟ ಸ್ವಾಮೀಜಿ…!!
- ಕರ್ನಾಟಕ
- September 11, 2023
- No Comment
- 125
ನ್ಯೂಸ್ ಆ್ಯರೋ : ಹುಬ್ಬಳ್ಳಿಯಲ್ಲಿ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಸ್ವಾಮೀಜಿ ಹೇಳಿದ್ದೇನು?
ರಾಜ್ಯ ಮತ್ತು ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದ್ದು, ಯುಗಾದಿ ನಂತರ ಏನಾಗುತ್ತೋ ಕಾದು ನೋಡಿ ಎಂದಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿ, ಅದು ಅವರವರ ವಿಚಾರ. ಅದರ ಬಗ್ಗೆ ಹೇಳಲು ಆಗುವುದಿಲ್ಲ ಎಂದು ನುಡಿದಿದ್ದಾರೆ.
ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಆರೋಪವನ್ನು ನಿರಾಕರಿಸಿದ ಅವರು, ಆ ರೀತಿ ಆಗಲ್ಲ. ರಾಜ್ಯ ಸಂಪತ್ಬರಿತವಾಗಿರಲಿದೆ. ಜನ ಸಾಮಾನ್ಯರಿಗೆ ಅನುಕೂಲವಾಗಿದೆ ಎಂದಿದ್ದಾರೆ.
ಬರಗಾಲದ ಛಾಯೆ ಬಗ್ಗೆ ಮಾಹಿತಿ ನೀಡಿದ ಸ್ವಾಮೀಜಿ, ಮನುಷ್ಯ ಮಾಡಿದ ತಪ್ಪುಗಳನ್ನು ದೇವರು ಕ್ಷಮಿಸುತ್ತಾನೆ. ಆದರೆ ಮನುಷ್ಯ ಮಾಡಿದ ಪಾಪಕರ್ಮಗಳು ಮನುಷ್ಯನನ್ನು ಕ್ಷಮಿಸುವುದಿಲ್ಲ. ಮನುಷ್ಯನ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ. ಕರ್ಮ ಬಾಧೆಗಳು ಹೆಚ್ಚಾದಾಗ ಇಂತಹ ಪರಿಸ್ಥಿತಿಯನ್ನು ಸಾಮೂಹಿಕವಾಗಿ ಎದುರಿಸಬೇಕಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಶ್ರಾವಣ ಮಾಸದ ಮಧ್ಯ ಭಾಗದಲ್ಲಿ ಮಳೆಯಾಗಿದೆ. ಅಮಾವಾಸ್ಯೆ ಕಳೆದ ನಂತರ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸನಾತನ ಧರ್ಮದ ವಿಚಾರ
ಇನ್ನು ಸನಾತನ ಧರ್ಮದ ಬಗ್ಗೆ ಮಾತನಾಡಿ ವಿವಾದ ಹುಟ್ಟಿಸಿದ ಉದಯನಿಧಿ ಸ್ಟಾಲಿನ್ ಬಗ್ಗೆ ಮಾತನಾಡಿದ ಕೋಡಿಶ್ರೀ, ಅವರು ಈ ವಿಚಾರವನ್ನು ಯಾವ ನೋವಿನಿಂದ ಹೇಳಿದ್ದಾರೋ ಗೊತ್ತಿಲ್ಲ. ಆಯಾ ಧರ್ಮದಲ್ಲಿರುವವರು ತಮಗಾಗಿರುವ ನೋವಿನಿಂದ ಈ ರೀತಿಯ ಹೇಳಿಕೆ ನೀಡುತ್ತಾರೆ. ಜನರಲ್ಲಿ ಪೂರ್ಣವಾದ ಜ್ಞಾನದ ಕೊರತೆ ಇದೆ. ಅರಿವಿನ ಕೊರತೆಯಿಂದ ಈ ರೀತಿ ಧರ್ಮ, ರಾಜಕೀಯ ವಿಚಾರ ಮುನ್ನಲೆಗೆ ಬರುತ್ತದೆ ಎಂದು ಹೇಳಿದ್ದಾರೆ.