ಕರ್ನಾಟಕದ KSRTCಗೆ ಸಿಕ್ತು ಭರ್ಜರಿ ಸಕ್ಸಸ್ – ಕೇರಳದ ತಕರಾರು ಅರ್ಜಿ ರಿಜೆಕ್ಟ್ ಮಾಡಿದ ಕೋರ್ಟ್…!

ಕರ್ನಾಟಕದ KSRTCಗೆ ಸಿಕ್ತು ಭರ್ಜರಿ ಸಕ್ಸಸ್ – ಕೇರಳದ ತಕರಾರು ಅರ್ಜಿ ರಿಜೆಕ್ಟ್ ಮಾಡಿದ ಕೋರ್ಟ್…!

ನ್ಯೂಸ್ ಆ್ಯರೋ : ಕೆಎಸ್ ಆರ್ ಟಿಸಿ ಹೆಸರು ಬಳಕೆಗೆ ಸಂಬಂಧಿಸಿ ಅನೇಕ ರೀತಿಯ ಚರ್ಚೆಗಳು, ವಾದ- ವಿವಾದಗಳು ನಡೆದಿತ್ತು. ಆದರೆ ಇದೀಗ ಕೆ‌ಎಸ್‌ಆರ್‌ಟಿಸಿ ಹೆಸರು‌ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳುವ ಮೂಲಕ ಮದ್ರಾಸ್ ಹೈಕೋರ್ಟ್‌ನಲ್ಲಿ ಕೇರಳ ಸರ್ಕಾರದ ರಸ್ತೆ ಸಾರಿಗೆ ನಿಗಮವು (RTC) ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ ಟಿ ಸಿ’ಎಂದು ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013 ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣಪತ್ರಗಳನ್ನು ಸಂಸ್ಥೆಯು ದಿನಾಂಕ 1.11.1973 ಯಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿರುತ್ತದೆ. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್, ರವರಿಂದ ‘KSRTC’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ಅನ್ನು ಸಹ ಪಡೆಯಲಾಗಿರುತ್ತದೆ.

ಕೇರಳದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್…

ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ ಮುಂದೆ ಕೇರಳ ಸಾರಿಗೆ ನಿಗಮದಿಂದ ಪ್ರಶ್ನೆ ಮಾಡಲಾಗಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 42 ವರ್ಷಗಳಿಂದ ಕರ್ನಾಟಕ ರಸ್ತೆ ಸಾರಿಗೆ ನಿಮಗದಿಂದ (RTC) ಟ್ರೇಡ್ ಮಾರ್ಕ್ ಅನ್ನು ಬಳಸುವುದರ ಬಗ್ಗೆ ತಿಳಿದಿರುತ್ತದೆ ಆದ್ದರಿಂದ KSRTCಯು ಪಡೆದಿರುವ ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ನೀವು (ಕೇರಳದ ರಸ್ತೆ ಸಾರಿಗೆ ನಿಗಮ) ಅರ್ಹರಾಗಿರುವುದಿಲ್ಲ ಎಂದು KSRTC ವಾದಿಸಿದೆ.

ಕೇರಳ KRTC ಕೂಡ 2019ರಲ್ಲಿ KSRTCಗೂ ಹಿಂದಿನಿಂದ ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು ನೋಂದಣಿಯನ್ನು ಪಡೆದುಕೊಂಡಿದೆ. ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈ ಪ್ರಕರಣವು ಡಿ.12ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿದ್ದು, ಕೇರಳ RTC ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಗಮನಿಸಿ: ಕೇರಳದ KRTC ಸಲ್ಲಿಸಿದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌ (KSRTC) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ ಕೆಎಸ್‌ಆರ್‌ಟಿಸಿ ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *