ರಾಜ್ಯದ 63 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ – 13 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ಪರಿಶೀಲನೆ, ಶೋಧಕಾರ್ಯ

ನ್ಯೂಸ್ ಆ್ಯರೋ‌ : ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ (Karnataka Lokayukta )ನಡೆಸಿದೆ.

ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ‌‌‌ ಎನ್ನಲಾಗುತ್ತಿದೆ‌.

ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳ ಮನೆ, ಕಚೇರಿಗಳು, ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ.