ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ, ಮತ್ತೆ ಮಾಸ್ಕ್ ಕಡ್ಡಾಯ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ, ಮತ್ತೆ ಮಾಸ್ಕ್ ಕಡ್ಡಾಯ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ನ್ಯೂಸ್ ಆ್ಯರೋ : ರಾಜ್ಯದಲ್ಲಿ ಕೊರೊನಾ ಭೀತಿ ಮುಂದುವರಿದಿದ್ದು, 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವುದು ಕಡ್ಡಾಯ, ಹೃದಯ ಸಮಸ್ಯೆ ಇರುವವರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಅದು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಾಧ್ಯಮದ ಮುಂದೆ ಮಾತನಾಡಿದ ಸಚಿವರು, “ಜನ ಓಡಾಡದೆ ಇರುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಸಹಜ ಸ್ಥಿತಿಯಲ್ಲಿ ಇದೆ. ಯಾವುದೇ ರೀತಿಯಾದ ನಿರ್ಬಂಧ ವಿಲ್ಲ. ಹೆಚ್ಚು ಪಾಸಿಟಿವ್ ಪ್ರಕರಣಗಳು ಬಂದರೆ ಮಾತ್ರ ನಿರ್ಬಂಧದ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ರಾಜ್ಯದಲ್ಲಿ ಆ ರೀತಿ ಪರಿಸ್ಥಿತಿ ಇಲ್ಲ, ಯಾವುದೇ ರೀತಿಯಾಗಿ ಆತಂಕ ಪಡುವುದು ಬೇಡ ಎಂದರು.

ಕೊರೊನಾ ರೂಪಾಂತರ ತಡೆಯ ಬಗ್ಗೆ ಯಾರೂ ಕೂಡ ಭಯಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟ ವೃದ್ಧರು ಎಲ್ಲರೂ ತಪಾಸಣೆ ಮಾಡಿಕೊಳ್ಳಬೇಕು. ಕೊರೊನಾ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ ಧರಿಸಿ. ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಿದ್ದೇವೆ. ಎಂದರು.

ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್ ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇರಳ ಗಡಿ ಜಿಲ್ಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಶೀತ, ಜ್ವರ, ಕೆಮ್ಮು ಇರುವವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಅಷ್ಟೇ ನಿಷೇಧ. ಸದ್ಯಕ್ಕೆ ಅಂತಹ ಪರಿಸ್ಥಿತಿಯಿಲ್ಲ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ವಿವರಿಸಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *