ನಾಳೆ ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ – ಕರಾವಳಿಯ ಶಾಲೆ-ಕಾಲೇಜುಗೆ ರಜೆ ಸಾರಲು ಶಾಸಕ ಸುನೀಲ್ ಕುಮಾರ್ ಮನವಿ

ನಾಳೆ ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ – ಕರಾವಳಿಯ ಶಾಲೆ-ಕಾಲೇಜುಗೆ ರಜೆ ಸಾರಲು ಶಾಸಕ ಸುನೀಲ್ ಕುಮಾರ್ ಮನವಿ

ನ್ಯೂಸ್‌ ಆ್ಯರೋ : ಕರಾವಳಿಯಲ್ಲಿ ಪ್ರತಿಯೊಬ್ಬರು ಆಚರಿಸುವ ನಾಗರ ಪಂಚಮಿ ದಿನವಾದ ಆಗಸ್ಟ್ 21 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ರಜೆ ಘೋಷಿಸುವಂತೆ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ಅವರು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ನಾಗರ ಪಂಚಮಿಯು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳನ್ನು ಒಳಗೊಂಡಿರುವ ತುಳುನಾಡಿನಲ್ಲಿ ಹಿಂದೂಗಳು ಮತ್ತು ಜೈನರು ಆಚರಿಸುವ ನಾಗ ಪಂಚಮಿ ಪ್ರಮುಖ ಸಾಂಪ್ರದಾಯಿಕ ಹಬ್ಬವಾಗಿದ್ದು, ದೈವ ದೇವರುಗಳ ಆರಧಾನೆಯಲ್ಲಿ ನಾಗರಾಧನೆಯು ಪ್ರಮುಖವಾಗಿದೆ. ಹೀಗಾಗಿ ಉಭಯ ಜಿಲ್ಲೆಗಳಲ್ಲಿ ನಾಗರ ಪಂಚಮಿಯಂದು ರಜೆ ಘೋಷಿಸುವಂತೆ ಬಿಜೆಪಿ ಶಾಸಕರು ಮನವಿ ಮಾಡಿದ್ದಾರೆ.

ತುಳುವರ ವಿಶೇಷ ಹಬ್ಬವಾದ ನಾಗರ ಪಂಚಮಿಯಂದು ಅವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಬೇಕೆಂದು ಮಾಜಿ ಸಚಿವ ಸುನೀಲ್ ಕುಮಾರ್ ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಇದೇ 21ರಂದು ನಾಡಿನಾದ್ಯಂತ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನೂ ಈ ಹಬ್ಬ ಕರಾವಳಿ ಮಂದಿಗೆ ತುಂಬಾನೆ ವಿಶೇಷವಾಗಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕುಡುಪು ಶ್ರೀ ಅನಂಂತೇಶ್ವ ದೇವಸ್ಥಾನ ಸೇರಿದಂತೆ ವಿವಿಧ ಶ್ರದ್ಧಾ ಕೇಂದ್ರಗಳಲ್ಲಿ ಹಾಗೂ ಆಯಾ ಕುಟುಂಬದ ನಾಗಬನದಲ್ಲಿ ವಿಶೇಷ ಪೂಜೆ ನಡೆಯಲಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *