ನಕಲಿ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ – ರಾಜ್ಯದ 3 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು

ನಕಲಿ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ – ರಾಜ್ಯದ 3 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು

ನ್ಯೂಸ್ ಆ್ಯರೋ‌ : ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,02 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ಆಹಾರ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯಾದ್ಯಂತ 3,30,02 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 ಬಿಪಿಎಲ್ ಕಾರ್ಡ್ ಗಳಿವೆ. ಕೆಲ ಕಾರ್ಡ್ ಗಳನ್ನು ಎಪಿಎಲ್ ಗೂ ಪರಿವರ್ತಿಸಲಾಗಿದೆ. ಬೆಂಗಳೂರಿನಲ್ಲಿ 34,705, ವಿಜಯಪುರದಲ್ಲಿ 28, 735, ಕಲಬುರಗಿ 16,945, ಬೆಳಗಾವಿ 16,765, ರಾಯಚೂರು 16,693 ಹಾಗೂ ಚಿತ್ರದುರ್ಗದಲ್ಲಿ 16,537 ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರ ನೌಕರರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ ಎಂಬ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿದ್ದು, ಈವರೆಗೆ 17,338 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಹೊಸ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಹಾರ ಇಲಾಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 2021-22 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಕೋರಿ ರಾಜ್ಯಾದ್ಯಂತ ಸಲ್ಲಿಕೆಯಾಗಿರುವ 7,61,902 ಅರ್ಜಿಗಳ ಪೈಕಿ ,18,046 ಅರ್ಜಿಗಳು ವಿಲೇವಾರಿಯಾಗಿವೆ. 2,60,418 ಅರ್ಜಿಗಳು ಅನುಮೋದನೆಯಾದರೆ, 1,57,625 ಅರ್ಜಿಗಳು ತಿರಸ್ಕೃತಗೊಂಡಿವೆ. 3,43,856 ಅರ್ಜಿಗಳು ಬಾಕಿ ಉಳಿದಿದ್ದು, ವಿಲೇವಾರಿಗೆ ಸರ್ಕಾರದ ಅನುಮತಿಗಾಗಿ ಆಹಾರ ಇಲಾಖೆ ಕಾಯುತ್ತಿದೆ. ಅನುಮತಿ ಸಿಕ್ಕ ತಕ್ಷಣ ಪ್ರಕ್ರಿಯೆ ಶುರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *