ವಿದ್ಯುತ್ ತಂತಿ ತುಳಿದು‌ ತಾಯಿ, ಮಗು ಸಾವು – ಐವರು ಬೆಸ್ಕಾಂ‌ ಅಧಿಕಾರಿಗಳು ಅಮಾನತು, ಬಂಧನ-ಬಿಡುಗಡೆ

ವಿದ್ಯುತ್ ತಂತಿ ತುಳಿದು‌ ತಾಯಿ, ಮಗು ಸಾವು – ಐವರು ಬೆಸ್ಕಾಂ‌ ಅಧಿಕಾರಿಗಳು ಅಮಾನತು, ಬಂಧನ-ಬಿಡುಗಡೆ

ನ್ಯೂಸ್ ಆ್ಯರೋ : ಬೆಸ್ಕಾಂ ವೈಟ್‌ ಫೀಲ್ಡ್‌ ವಿಭಾಗ ವ್ತಾಪ್ತಿಯ ಕಾಡುಗೋಡಿಯ 4 ನೇ ಪೂರ್ವ ಉಪ ವಿಭಾಗದ ಕಾಡುಗೋಡಿ ಹೋಪ್‌ ಫಾರ್ಮ್‌ ಸಿಗ್ನಲ್‌ ಸಮೀಪ ಪಾದಚಾರಿ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ 11ಕೆವಿ ವಿದ್ಯುತ್‌ ತಂತಿ ತುಳಿದು ತಾಯಿ-ಮಗಳು ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಬೆಸ್ಕಾಂನ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿ, ಇಬ್ಬರು ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದೆ.

ಭಾನುವಾರ ಬೆಳಗ್ಗೆ 5.30 ರ ಸಮಯದಲ್ಲಿ ಸೌಂದರ್ಯ ( 23 ) ಅವರ ಮಗಳು ಲೀಲಾ ಅವರು ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಸ್ಥಳದಲ್ಲೇ ಮೃತ ಪಟ್ಟಿದ್ದರು.

ಈ ಇಲಾಖೇತರ ಮಾರಣಾಂತಿಕ ವಿದ್ಯುತ್‌ ಅಪಘಾತವನ್ನು ಗಂಭೀರವಾಗಿ ಪರಿಗಣಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಕರ್ತವ್ಯಲೋಪಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತುಗೊಳಿಸಲು ಇಂಧನ ಇಲಾಖೆಗೆ ನಿರ್ದೇಶಿಸಿದ್ದರು.

ಇಂಧನ ಸಚಿವರ ಸೂಚನೆ ಮೇರೆಗೆ 4ನೇ ಪೂರ್ವ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಸುಬ್ರಮಣ್ಯ ಟಿ., ಸಹಾಯಕ ಇಂಜಿನಿಯರ್‌ ಚೇತನ್‌ ಎಸ್‌., ಕಿರಿಯ ಇಂಜಿನಿಯರ್‌ ರಾಜಣ್ಣ., ಕಿರಿಯ ಪವರ್‌ ಮನ್‌ ಮಂಜುನಾಥ್‌ ರೇವಣ್ಣ ಹಾಗೂ ಲೈನ್‌ ಮನ್‌ ಬಸವರಾಜು ಅವರನ್ನು ಅಮಾನತುಗೊಳಿಸಿ ಬೆಸ್ಕಾಂ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ವಿಸೃತ ತನಿಖೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು.

ಅದೇ ರೀತಿ ಕರ್ತವ್ಯಲೋಪಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಪೂರ್ವ ವೃತ್ತದ ಅಧೀಕ್ಷಕ ಇಂಜಿನಿಯರ್‌ ಲೋಕೇಶ್‌ ಬಾಬು ಎಂ ಹಾಗೂ ಬೆಸ್ಕಾಂ ವೈಟ್‌ ಫೀಲ್ಡ್‌ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಆಗಿರುವ ಶ್ರೀರಾಮು ಅವರಿಗೆ ಕಾರಣ ಕೇಳಿ ಶೋಕಾಸ್‌ ನೋಟಿಸ್‌ ನೀಡಲಾಗಿದೆ.

ಘಟನೆ ವಿವರ:

ಕಾಡುಗೋಡಿಯ ಎಫ್‌ 9 ಬಿಪಿಎಲ್‌ ಫೀಡರ್‌ ಬೆಳಗ್ಗೆ 3.50ಕ್ಕೆ ಟ್ರಿಪ್‌ ಆಗಿತ್ತು. ಪುನ: 3.55 ಕ್ಕೆ ಲೈನ್‌ ಚಾರ್ಜ್‌ ಆಗಿರುವುದು ದಾಖಲಾಗಿರುತ್ತದೆ. ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು, ಅದರಲ್ಲಿ ವಿದ್ಯುತ್‌ ಪ್ರವಹಿಸುತ್ತಿತ್ತು. ಈ ತುಂಡಾದ ತಂತಿ ತುಳಿದು ತಾಯಿ ಮಗಳು ಮೃತ ಪಟ್ಟಿದ್ದಾರೆ‌.

ಬೆಸ್ಕಾಂ ಅಧಿಕಾರಿಗಳ ಈ ಕರ್ತವ್ಯಲೋಪವನ್ನು ಇಂಧನ ಸಚಿವರು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ರಾಜ್ಯದ ಎಲ್ಲಾ ಎಸ್ಕಾಂಗಳ ಇಂಜಿನಿಯರ್‌ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಪೊಲೀಸರು ಐವರು ಅಧಿಕಾರಿಗಳನ್ನು ಬಂಧಿಸಿದ್ದರು. ಇದೀಗ ಬಂಧಿತ ಐವರು ಅಧಿಕಾರಿಗಳನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *